ಸೋಮವಾರ, ಮೇ 23, 2022
22 °C
ಕಲಾವಿದ ಡಿ.ಓ.ಮುರಾರ್ಜಿ ಆರೋಪ

ಕೆಲವರ ಕಪಿಮುಷ್ಟಿಯಲ್ಲಿ ಪರಿಷತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಒಂದು ವರ್ಗ ಹಾಗೂ ಕೆಲವರ ಕಪಿಮುಷ್ಟಿಗೆ ಸಿಲುಕಿದೆ. ಪರಿಷತ್ತನ್ನು ಇದರಿಂದ ಹೊರತರಲು ಉತ್ಸಾಹಿ ಸಾಹಿತ್ಯ ಪರಿಚಾರಕರ ಅಗತ್ಯವಿದೆ ಎಂದು ಕಲಾವಿದ ಡಿ.ಓ.ಮುರಾರ್ಜಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಗದಿತ ವಲಯಕ್ಕೆ ಪರಿಷತ್ತು ಸೀಮಿತವಾಗಿದೆ. ಪರಿಷತ್ತಿನಲ್ಲಿ ಇನ್ನಷ್ಟು ಕ್ರಿಯಾಶೀಲತೆ ತರಲು ಹೊಸಬರ ಅಗತ್ಯವಿದೆ. ಹೀಗಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಭ್ಯರ್ಥಿಯಾಗಲು ಬಯಸಿದ್ದೇನೆ’ ಎಂದು ಹೇಳಿದರು.

‘ಬೀದಿನಾಟಕದ ಮೂಲಕ ಸಾಂಸ್ಕೃತಿಕ ಜಗತ್ತಿಗೆ ಪದಾರ್ಪಣೆ ಮಾಡಿದೆ. ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಳಕಾಲ್ಮುರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದೇನೆ. ಹಲವು ಸಾಹಿತಿಗಳು, ಮಠಾಧೀಶರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇನೆ. ಆಯ್ಕೆಯಾದರೆ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶ್ರಮಿಸುತ್ತೇನೆ’ ಎಂದು ಆಶ್ವಾಸನೆ ನೀಡಿದರು.

ವಕೀಲ ವಿಜಯಕುಮಾರ್‌, ಕಲಾವಿದರಾದ ಶ್ರೀನಿವಾಸ, ವಿನಯ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು