ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮ ಜಾಗೃತಿ ಸಮಾವೇಶ 11ಕ್ಕೆ

ಮಠಾಧೀಶರ ಒಕ್ಕೂಟದ ಸಮ್ಮಿಲನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ
Last Updated 3 ಜುಲೈ 2022, 9:41 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿಶ್ವಕರ್ಮ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ ದಾವಣಗೆರೆಯ ಬಾಪೂಜಿ ಬ್ಯಾಂಕ್‌ ಸಮುದಾಯ ಭವನದಲ್ಲಿ ಜುಲೈ 11ರಂದು ವಿಶ್ವಕರ್ಮ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್‌ ರಾಜ್ಯ ಘಟಕದ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿಳಿಸಿದರು.

‘ಮಠಾಧೀಶರು, ಪೀಠಾಧಿಪತಿಗಳ ಒಕ್ಕೂಟದ ಸಮ್ಮಿಲನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಪುರೋಹಿತರು, ಅರ್ಚಕರನ್ನು ಸನ್ಮಾನಿಸಲಾಗುತ್ತದೆ. ರಾಜ್ಯದ ವಿವಿಧೆಡೆಯಿಂದ ಬರುವ ಹತ್ತು ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಬಿ.ಎಸ್‌.ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಇತರ ಗಣ್ಯರನ್ನು ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಸಮುದಾಯದ 110ಕ್ಕೂ ಹೆಚ್ಚು ಪೀಠಾಧಿಪತಿಗಳು ಸಮಾವೇಶಕ್ಕೆ ಆಗಮಿಸಲಿದ್ದಾರೆ’ ಎಂದು ವಿವರಿಸಿದರು.

‘ಕಮ್ಮಾರ, ಕಂಚುಗಾರ, ಅಕ್ಕಸಾಲಿಗ, ಶಿಲ್ಪಿ, ಬಡಗಿ ಎಂಬ ಐದು ಕಾಯಕದ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವವರು ವಿಶ್ವಕರ್ಮರು. ಕುರುಬ ಸಮುದಾಯ ಹೊರತುಪಡಿಸಿದರೆ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯ ಇದಾಗಿದೆ. ರಾಜ್ಯದ ಪ್ರತಿ ಹಳ್ಳಿಯಲ್ಲಿ ವಿಶ್ವಕರ್ಮರು ನೆಲೆಸಿದ್ದಾರೆ. ಆದರೆ, ರಾಜಕೀಯ, ಆರ್ಥಿಕವಾಗಿ ಸಿಗಬೇಕಾದ ಮಾನ್ಯತೆಗಳು ಲಭ್ಯವಾಗಿಲ್ಲ’ ಎಂದರು.

ಆಟಕ್ಕುಂಟು ಲೆಕ್ಕಕ್ಕಿಲ್ಲ: ಬೇಸರ

ರಾಜ್ಯದಲ್ಲಿ ವಿಶ್ವಕರ್ಮ ಸಮುದಾಯ 42 ಲಕ್ಷ ಜನಸಂಖ್ಯೆ ಹೊಂದಿದೆ. ಆದರೂ, ಸಮುದಾಯವನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ರಾಜಕಾರಣಿಗಳು ನಡೆಸಿಕೊಳ್ಳುತ್ತಿದ್ದಾರೆ ಎಂದು ವಡ್ನಾಳ ವಿಶ್ವಕರ್ಮ ಸಾವಿತ್ರಿ ಪೀಠದ ಶಂಕರಾತ್ಮಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

‘ಕೋವಿಡ್‌ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಮುದಾಯಕ್ಕೆ ಸರ್ಕಾರದ ನೆರವು ಸಿಗಲಿಲ್ಲ. ಸಮುದಾಯಕ್ಕೆ ಮೀಸಲಿಟ್ಟ ಅನುದಾನವನ್ನು ಹಿಂಪಡೆಯಲಾಯಿತು. ಇನ್ನು ಮುಂದೆ ಸಹನೆಯಿಂದ ಇರುವುದಿಲ್ಲ. ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡು ಶಕ್ತಿಪ್ರದರ್ಶನ ಮಾಡಲಿದ್ದೇವೆ’ ಎಂದು ಹೇಳಿದರು.

ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮೌನೇಶ್‌ ಆಚಾರ್‌, ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಶಂಕರಮೂರ್ತಿ, ಸಮುದಾಯದ ಮುಖಂಡರಾದ ಸಿ.ನಾರಾಯಣಾಚಾರ್‌, ಎ.ಶಂಕರಾಚಾರ್‌ ಇದ್ದರು.

***

ವಿಶ್ವಕರ್ಮ ಸಮಾಜ ಎಲ್ಲ ವರ್ಗದವರನ್ನು ಪ್ರೀತಿಯಿಂದ ಕಾಣುತ್ತದೆ. ಸಮುದಾಯದಲ್ಲಿ 41 ಉಪಜಾತಿಗಳಿದ್ದು, ಎಲ್ಲರೂ ಒಗ್ಗೂಡುವ ಅಗತ್ಯವಿದೆ.
ಎಲ್‌.ನಾರಾಯಣಾಚಾರ್‌,ನಿವೃತ್ತ ಪೌರನೌಕರರ ಸಂಘದಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT