ಶನಿವಾರ, ಏಪ್ರಿಲ್ 1, 2023
23 °C

ವೈದ್ಯಕೀಯ ಕಾಲೇಜು: ಶಾಸಕ, ಸಂಸದರ ಭಿನ್ನಾಭಿಪ್ರಾಯಕ್ಕೆ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡುವ ವಿಚಾರದಲ್ಲಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಾಗೂ ಸಂಸದ ಎ.ನಾರಾಯಣಸ್ವಾಮಿ ತಳೆದಿರುವ ಭಿನ್ನ ನಿಲುವು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಇಂಗಳದಾಳ್‌ ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿದೆ ಎಂಬುದಾಗಿ ಸಂಸದರು ಹೇಳಿಕೆ ನೀಡಿದ್ದರು. ಜಿಲ್ಲಾ ಆಸ್ಪತ್ರೆಯ ಆವರಣವೇ ಕಾಲೇಜಿಗೆ ಸರಿಯಾದ ಸ್ಥಳ ಎಂಬುದಾಗಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಲೇಜಿಗೆ ಯಾವ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಚಿತ್ರದುರ್ಗ ಜನರ ದಶಕದ ಕನಸು. ಹೋರಾಟದ ಫಲವಾಗಿ ಇದು ನನಸಾಗುವ ಕಾಲ ಸನ್ನಿಹಿತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗೂಡಿ ಕಾಲೇಜು ಸ್ಥಾಪನೆಗೆ ಶ್ರಮಿಸಬೇಕು. ಭಿನ್ನ ನಿಲುವು ತಳೆದು ಸ್ಥಳ ಆಯ್ಕೆ ಪ್ರಕ್ರಿಯೆಯನ್ನು ವಿಳಂಬ ಮಾಡಿದರೆ ಕಾಲೇಜು ನಿರ್ಮಾಣಕ್ಕೆ ತೊಂದರೆ ಆಗಬಹುದು’ ಎಂದು ಕಳವಳ ವ್ಯಕ್ತಪಡಿಸಿದರು.

ಮುಖಂಡರಾದ ಎಂ.ಆರ್‌.ಶಿವರಾಜ್‌, ರವಿಕುಮಾರ್‌ ನಾಯ್ಕ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು