ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸದುರ್ಗ: ಖಾಸಗಿ ಬ್ಯಾಂಕ್‌ ವ್ಯವಸ್ಥಾಪಕ ಆತ್ಮಹತ್ಯೆ

Published : 5 ಆಗಸ್ಟ್ 2024, 16:22 IST
Last Updated : 5 ಆಗಸ್ಟ್ 2024, 16:22 IST
ಫಾಲೋ ಮಾಡಿ
Comments

ಹೊಸದುರ್ಗ: ಪಟ್ಟಣದ ಐಡಿಎಫ್‌ಸಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿದ್ದ ಸಂತೋಷ್‌ ಕುಮಾರ್‌ (38) ಬ್ಯಾಂಕ್‌ ಮೇಲಂತಸ್ತಿನಲ್ಲಿದ್ದ ಲಾಡ್ಜ್‌ನ ಕೊಠಡಿಯಲ್ಲಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಮೂಲದ ಸಂತೋಷ್‌ ಕುಮಾರ್‌ ಅವರು ಭಗೀರಥ ಲಾಡ್ಜ್‌ನಲ್ಲಿ ತಂಗಿದ್ದರು. ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಲಾಡ್ಜ್‌ಗೆ ಬಂದು ಕೊಠಡಿ ಪಡೆದಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಅವರ ವಿವಾಹವಾಗಿತ್ತು. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದರು.

ಮೈಸೂರಿನ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು ಅವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಅವರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪಟ್ಟಣ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT