ಚಿತ್ರದುರ್ಗ: ಖಾಸಗಿ ಬಸ್ ಸಂಚಾರ ಆರಂಭ

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ ಖಾಸಗಿ ಬಸ್‌ಗಳು ಸಂಚಾರ ಆರಂಭಿಸಿದವು. ಮೊದಲ ದಿನ ಕೆಲವೇ ಬಸ್‌ಗಳು ಪ್ರಯಾಣಿಕರಿಗೆ ಸೇವೆ ಒದಗಿಸಿದವು.
ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಹಲವೆಡೆ ರಸ್ತೆಗೆ ಇಳಿದವು. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕಾರಣಕ್ಕೆ ಶೇ 50ರಷ್ಟು ಪ್ರಯಾಣಿಕರಿಗೆ ಮಾತ್ರ ಸೇವೆ ಒದಗಿಸಲು ಅವಕಾಶವಿತ್ತು.
ಕೊರೊನಾ ಸೋಂಕು ಹೆಚ್ಚಳವಾದ ಕಾರಣ ಏಪ್ರಿಲ್ ತಿಂಗಳಲ್ಲಿಯೇ ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲಾಕ್‌ಡೌನ್ ಘೋಷಣೆಯಾದ ಬಳಿಕ ಸಂಪೂರ್ಣ ನಿಲುಗಡೆ ಮಾಡಲಾಗಿತ್ತು. ತೆರಿಗೆ ಉಳಿಸುವ ಉದ್ದೇಶದಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಯ ಕಚೇರಿಗೆ ಬಸ್‌ಗಳನ್ನು ಒಪ್ಪಿಸಲಾಗಿತ್ತು.
‘ಬಸ್ ಸೇವೆ ಪ್ರಾರಂಭಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಮಾರ್ಗಸೂಚಿ ಪಾಲಿಸಿ ಸೇವೆ ಒದಗಿಸಿದರೆ ನಷ್ಟ ಹೆಚ್ಚಾಗುತ್ತದೆ. ಜಿಲ್ಲೆಯ ಶೇ 20ರಷ್ಟು ಬಸ್‌ಗಳು ಮಾತ್ರ ಮೊದಲ ದಿನ ರಸ್ತೆಗೆ ಇಳಿದಿವೆ. ಬಸ್ ಮಾಲೀಕರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕಿದೆ’ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಲಿಂಗಾರೆಡ್ಡಿ ತಿಳಿಸಿದ್ದಾರೆ.
ಖಾಸಗಿ ಬಸ್ ಸಂಚಾರ ಆರಂಭವಾಗಿದ್ದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಿದೆ. ಸಂಚಾರ ಸಮಸ್ಯೆ ಎದುರಿಸುತ್ತಿದ್ದ ಜನರು ಮೊದಲ ದಿನವೇ ಸೇವೆ ಪಡೆದಿದ್ದಾರೆ. ಪ್ರಯಾಣಿಕರ ಸ್ಪಂದನೆ ಆಧರಿಸಿ ಬಸ್ ಓಡಿಸಲು ಮಾಲೀಕರು ನಿರ್ಧರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.