ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ | ಖಾಸಗಿ ಬಸ್ ಪಲ್ಟಿ: ಮೂವರ ಸಾವು

Published 7 ಏಪ್ರಿಲ್ 2024, 2:38 IST
Last Updated 7 ಏಪ್ರಿಲ್ 2024, 2:38 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣದ ಹೊರವಲಯದ ಹನುಮಂತ ದೇವರ ಕಣಿವೆಯ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ಭಾನುವಾರ ನಸುಕಿನಲ್ಲಿ ಖಾಸಗಿ ಬಸ್ ಉರುಳಿ ಬಿದ್ದು ಮೂವರು ಮೃತಪಟ್ಟಿದ್ದಾರೆ.

‘ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ ಸುಮಾರು 35 ಪ್ರಯಾಣಿಕರಿದ್ದರು. ಗಾಯಗೊಂಡವರನ್ನು ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆಯ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿದೆ. ಕ್ರೇನ್ ಮೂಲಕ ಬಸ್ ಮೇಲಕ್ಕೆ ಎತ್ತಲಾಗಿದೆ. ಸಾವನ್ನಪ್ಪಿದವರ ವಿವರ ಲಭ್ಯವಾಗಬೇಕಿದೆ’ ಎಂದು ಪಿಎಸ್‌ಐ ಸುರೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT