ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಪ್ರಿಯಾಂಕ ಗಾಂಧಿ ಹೆಲಿಕಾಫ್ಟರ್‌ ತಪಾಸಣೆ

Published 23 ಏಪ್ರಿಲ್ 2024, 13:39 IST
Last Updated 23 ಏಪ್ರಿಲ್ 2024, 13:39 IST
ಅಕ್ಷರ ಗಾತ್ರ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಮಂಗಳವಾರ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಯಾಣಿಸಿದ ಹೆಲಿಕಾಫ್ಟರ್‌ ಅನ್ನು ಚುನಾವಣಾಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಭಾಗವಹಿಸಲು ಪ್ರಿಯಾಂಕಾ ಗಾಂಧಿ ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕ್ಯಾಪ್ಟರ್‌ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್‌ ತಂಡ ಪರಿಶೀಲನೆ ನಡೆಸಿತು.

ತಹಶೀಲ್ದಾರ್‌ ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅನಂತರಾಜು ಹಾಗೂ ಎಫ್‌ಎಸ್‌ಟಿ ತಂಡದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT