ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಅಹೋರಾತ್ರಿ ಧರಣಿ

Last Updated 19 ಅಕ್ಟೋಬರ್ 2020, 14:17 IST
ಅಕ್ಷರ ಗಾತ್ರ

ಚಿತ್ರದುರ್ಗ: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಸೋಮವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ವಲಯದ ಖಾಸಗೀಕರಣ ನಿಲ್ಲಿಸುವಂತೆ ಹಾಗೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಸಲ್ಲಿಸಿ ಹಲವು ವರ್ಷ ಉರುಳಿವೆ. ವರದಿ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಶತಮಾನಗಳಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದರೂ ದಲಿತರ ಬಗ್ಗೆ ಕಾಳಜಿ ತೋರುತ್ತಿಲ್ಲ. ಸ್ವಾತಂತ್ರ್ಯ ಸಿಕ್ಕು 70 ವರ್ಷ ಕಳೆದರೂ ದಲಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರನ್ನು ಅವಹೇಳನ ಮಾಡುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ರಾಮಚಂದ್ರ, ಗೌರವಾಧ್ಯಕ್ಷ ಪಿ.ಎಂ.ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಚಂದ್ರಪ್ಪಘಾಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT