ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ನಿಗದಿಗೆ ಒತ್ತಾಯ

ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರತಿಭಟನೆ
Last Updated 28 ಜನವರಿ 2021, 13:19 IST
ಅಕ್ಷರ ಗಾತ್ರ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮಾಡಬೇಕು ಹಾಗೂ 15ನೇ ಹಣಕಾಸು ಆಯೋಗದಲ್ಲಿ ಅಗತ್ಯ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಬಹುತೇಕರಿಗೆ ಕನಿಷ್ಠ ವೇತನವೂ ಸಿಗುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸೇವೆಯ ಆಧಾರದ ಮೇರೆಗೆ ಬಡ್ತಿ ನೀಡುತ್ತಿಲ್ಲ. ವೇತನಕ್ಕೆ 15ನೇ ಹಣಕಾಸು ಆಯೋಗದಲ್ಲಿ ಅನುದಾನ ಮೀಸಲಿಡುವ ಪ್ರಕ್ರಿಯೆ ಕೂಡ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಸಂಘದ ಜಿಲ್ಲಾ ಸಂಚಾಲಕ ಡಿ.ಎಂ.ಮಲಿಯಪ್ಪ, ಮುಖಂಡರಾದ ಶಶಿಕುಮಾರ್‌, ಮಾರಪ್ಪ, ಸನಾವುಲ್ಲ, ಉಮೇಶ್‌, ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT