ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದಂಗಡಿ ವಿರುದ್ಧ ಪ್ರತಿಭಟನೆ

Last Updated 16 ಜೂನ್ 2021, 14:44 IST
ಅಕ್ಷರ ಗಾತ್ರ

ಚಿತ್ರದುರ್ಗ: ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಕಲ್ಪಿಸಿದ ಅಬಕಾರಿ ಇಲಾಖೆಯ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಮುಖಂಡರು ಮದ್ಯದಂಗಡಿ ಮಾಲೀಕರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ‍ಪಡಿಸಿದರು.

ಆಂಧ್ರಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧ ಇರುವುದರಿಂದ ಕರ್ನಾಟಕದ ಗಡಿಯಲ್ಲಿ ಮದ್ಯದಂಗಡಿಗಳ ಸಂಖ್ಯೆ ಹೆಚ್ಚಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದಾರು ಮದ್ಯದಂಗಡಿಗೆ ಪರವಾನಗಿ ನೀಡಲಾಗಿದೆ. ಇದು ಗ್ರಾಮೀಣ ಜನಜೀವನದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಆರೋಪಿಸಿದರು.

ಮದ್ಯ ಖರೀದಿಗೆ ಆಂಧ್ರಪ್ರದೇಶದ ಜನರು ಗಡಿಗೆ ಬರುತ್ತಿದ್ದಾರೆ. ಮದ್ಯದಂಗಡಿಯ ಎದುರು ಜನಜಂಗುಳಿ ನಿರ್ಮಾಣವಾಗುತ್ತಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದು ಅಪಾಯ. ಕೊರೊನಾ ಸೋಂಕು ಹರಡಿ ಸಮಸ್ಯೆ ಉಂಟಾಗುತ್ತಿದೆ. ಜನರ ಆರೋಗ್ಯದ ದೃಷ್ಟಿಯಿಂದ ಎಲ್ಲ ಮದ್ಯದಂಗಡಿ ತೆರವುಗೊಳಿಸಬೇಕು ಹಾಗೂ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡರಾದ ಕೆ.ಪಿ.ಭೂತಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT