ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

7

ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

Published:
Updated:
Deccan Herald

ಚಿತ್ರದುರ್ಗ: ಕೇಂದ್ರ ಸರ್ಕಾರ ಕನ್ನಡಿಗರ ಮೇಲೆ ಹಿಂದಿ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಓಬವ್ವ ವೃತ್ತಕ್ಕೆ ಧಾವಿಸಿದರು. ‘ಸೆ.14ರಂದು ಹಿಂದಿ ದಿನಾಚರಣೆ ಮಾಡುವ ಮೂಲಕ ಬಲವಂತವಾಗಿ ಹೇರಲು ಪ್ರಯತ್ನಿಸಿದೆ. ಪ್ರಾದೇಶಿಕ ಭಾಷೆಗೆ ಅವಮಾನ ಮಾಡಲಾಗುತ್ತಿದೆ. 2,500 ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯ ಮೇಲಿನ ದಬ್ಬಾಳಿಕೆ ಖಂಡನೀಯ’ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಟಿ.ರಮೇಶ್‌ ಆಕ್ರೋಶ ವ್ಯಕ್ತಪಡಿಸಿದರು.

‘ಭಾರತ ಒಂದು ಒಕ್ಕೂಟ ವ್ಯವಸ್ಥೆ. ಭಾಷಾವಾರು ಪ್ರಾಂತ್ಯಗಳಿಗೆ ಸ್ವಾಯತ್ತತೆ ಇದೆ. ದ್ರಾವಿಡ ಭಾಷೆಯಾದ ಕನ್ನಡಕ್ಕೆ ಇತಿಹಾಸವಿದೆ. ಕೇಂದ್ರ ಸರ್ಕಾರ ಕನ್ನಡಿಗರ ಮೇಲೆ ಭಾಷಾ ಹೇರಿಕೆ ಮಾಡುವುದನ್ನು ಬಿಡಬೇಕು. ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆಯಾಗಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಜಿ.ರಾಜಪ್ಪ, ನಗರ ಘಟಕದ ಅಧ್ಯಕ್ಷ ಪಿ.ಟಿ.ರಮೇಶ್, ಮುಖಂಡರಾದ ವೆಂಕಟೇಶ್, ಲಕ್ಷ್ಮಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !