ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು: ಕೇಂದ್ರ ಸರ್ಕಾರದ ವಿರುದ್ಧ ಲಾರಿ ಮಾಲೀಕರು, ಚಾಲಕರ ಪ್ರತಿಭಟನೆ

Published 17 ಜನವರಿ 2024, 14:29 IST
Last Updated 17 ಜನವರಿ 2024, 14:29 IST
ಅಕ್ಷರ ಗಾತ್ರ

ಹಿರಿಯೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸೆಕ್ಷನ್ 106 (1) ಮತ್ತು (2) ಕಾಯ್ದೆಯ ಹತ್ತು ವರ್ಷ ಜೈಲು, ಏಳು ಲಕ್ಷ ದಂಡದ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬುಧವಾರ ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

‘ಕೇಂದ್ರ ಸರ್ಕಾರದ ಆದೇಶ ಬಡ ಚಾಲಕರು, ಮಾಲೀಕರಿಗೆ ಮರಣ ಶಾಸನವಾಗಿದೆ. ಸರ್ಕಾರ ತಕ್ಷಣ ನೂತನ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಗೆ ತಾಲ್ಲೂಕು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಾಲ್ಲೂಕು ಸಮಿತಿ ಬೆಂಬಲ ನೀಡಿತ್ತು. ರಂಜಿತ್ ಹೋಟೆಲ್ ವೃತ್ತದಿಂದ ತಾಲ್ಲೂಕು ಕಚೇರಿಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು.

ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಖಾದಿ ರಮೇಶ್, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಘಟಕದ ಕಾರ್ಯದರ್ಶಿ ಕೆ.ರಾಮಚಂದ್ರ, ತಾಲ್ಲೂಕು ಘಟಕದ ಅಧ್ಯಕ್ಷ ಆರ್.ರಾಘವೇಂದ್ರ, ಲಾರಿ ಮಾಲೀಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೇಶವಮೂರ್ತಿ, ಚಾಲಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ, ರಘು, ಚನ್ನಗಿರಿ ಸಾಧಿಕ್, ಗೋ. ಬಸವರಾಜ್, ರಾಮಕೃಷ್ಣಪ್ಪ, ದಾದಾಪೀರ್, ಜಾಕಿರ್, ನಾಗರಾಜ್, ಕುಮಾರ್, ಮಣಿಕಂಠ, ರಘು, ಮಹಲಿಂಗ, ಮಸಿಯಣ್ಣ, ಮದನ್, ಲೋಕೇಶ್, ಕಿರಣ್ ಕುಮಾರ್, ರಂಗಸ್ವಾಮಿ, ನರೇಂದ್ರ, ಪ್ರಸಾದ್, ಮಾರುತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT