ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಡಿಹಳ್ಳಿ ಚಂದ್ರಶೇಖರ್‌ ಬಂಧನಕ್ಕೆ ಆಗ್ರಹ

ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ
Last Updated 27 ಮೇ 2022, 5:01 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜನವಿರೋಧಿ ಚಟುವಟಿಕೆ ಹಾಗೂ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಎಪಿಎಂಸಿ ಆವರಣದಿಂದ ಕೋಡಿಹಳ್ಳಿ ಚಂದ್ರಶೇಖರ್‌ ಅವರ ಪ್ರತಿಕೃತಿಯೊಂದಿಗೆ ಗಾಂಧಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೂ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

‘ರೈತ ಹೋರಾಟಕ್ಕೆ ಕೋಡಿಹಳ್ಳಿ ಚಂದ್ರಶೇಖರ್‌ ದೊಡ್ಡ ಕಳಂಕವಾಗಿದ್ದಾರೆ. ಇವರ ನಡೆಯಿಂದ ಜನಪರ ಚಳುವಳಿಗಳನ್ನು ಸಂಶಯದಿಂದ ನೋಡುವಂತಾಗಿದ್ದು, ಹೋರಾಟಗಾರ ಎಂಬ ಪದಕ್ಕೆ ಅಪವಾದವಾಗಿದ್ದಾರೆ. ಯಾವುದೇ ಪ್ರಮಾಣಿಕ ಆದಾಯದ ಮೂಲವಿಲ್ಲದೆ 2006ರಿಂದ ಬೆಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇವರ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಿ ರೈತ ಚಳವಳಿಗಳ ಗೌರವ ಕಾಪಾಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಮುಖಂಡ ಈಚಘಟ್ಟದ ಸಿದ್ದವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್‌.ಹಳ್ಳಿ ಮಲ್ಲಿಕಾರ್ಜುನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮರೆಡ್ಡಿ, ಬಸವರಾಜಪ್ಪ, ಶ್ರೀನಿವಾಸ್‌, ಲಿಂಗರಾಜು, ಮಹದೇವಪ್ಪ, ರಾಜಶೇಖರ್‌, ರಮೇಶ್‌ ಪಾಲ್ಗೊಂಡಿದ್ದರು.

ಪೊಲೀಸರೊಂದಿಗೆ ವಾಗ್ವಾದ

ನಗರದ ಎಪಿಎಂಸಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಪ್ರತಿಕೃತಿದಹನಕ್ಕೆ ಪ್ರತಿಭಟನಕಾರರು ಸಿದ್ಧತೆ ನಡೆಸಿದ್ದರು. ವಿಷಯ ತಿಳಿದ ಪೊಲೀಸರು ಪ್ರತಿಕೃತಿ ದಹನಕ್ಕೆ ಅನುಮತಿ ನಿರಾಕರಿಸಿದರು. ಈ ವೇಳೆ ಪೊಲೀಸರು, ರೈತ ಮುಖಂಡರ ನಡುವೆ ವಾಗ್ವಾದ ನಡೆಯಿತು. ಬಳಿಕ ಪ್ರತಿಕೃತಿ ದಹನದ ನಿರ್ಧಾರದಿಂದ ಹಿಂದೆ ಸರಿದು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT