ಮಂಗಳವಾರ, ಜುಲೈ 14, 2020
27 °C

ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು ಚೋಳಗಟ್ಟ ಗ್ರಾಮ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಯಾವ ಕಾರಣಕ್ಕೂ ರಾಜ್ಯದಲ್ಲಿ ಈ ಕಾಯ್ದೆಗಳ ತಿದ್ದುಪಡಿ ಆಗಬಾರದು. ರಾಜ್ಯ ಸರ್ಕಾರ ಉತ್ತಮ ನಿರ್ಣಯ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಲಾಕ್‌ಡೌನ್ ಘೋಷಣೆ ವೇಳೆ ಕೇವಲ 500 ಇದ್ದ ಸೋಂಕಿತರ ಸಂಖ್ಯೆ ಈಗ 3 ಲಕ್ಷ ಗಡಿದಾಟಿದೆ. ಇದು ಹೀಗೆ ಮುಂದುವರೆದವರೆ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದರೂ ಅಚ್ಚರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಗಳು ಲಾಕ್‌ಡೌನ್ ಪರಿಸ್ಥಿತಿ ದುರುಪಯೋಗಪಡಿಸಿಕೊಂಡಿವೆ. ಇಡೀ ದೇಶದ ಕೃಷಿ ಉತ್ಪಾದನೆ ಮತ್ತು ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಕಾನೂನು ತಿದ್ದುಪಡಿಗೆ ಮುಂದಾಗಿವೆ ಎಂದು ದೂರಿದರು.

ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ, ಎಐಕೆಎಸ್ ರಾಜ್ಯ ಘಟಕದ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ರಾಜ್ಯ ಮಂಡಳಿ ಸದಸ್ಯ ಟಿ.ಆರ್.ಉಮಾಪತಿ, ಮುಖಂಡರಾದ ಜಿ.ಸಿ.ಸುರೇಶ್ ‌ಬಾಬು, ಕೆ.ಇ.ಸತ್ಯಕೀರ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು