ಖಾಸಗಿ ಕೃಷಿ ವಿಶ್ವ ವಿದ್ಯಾಲಯಗಳಿಗೆ ಮಾನ್ಯತೆ ವಿರೋಧಿಸಿ ಪ್ರತಿಭಟನೆ

7
ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ದೂರು

ಖಾಸಗಿ ಕೃಷಿ ವಿಶ್ವ ವಿದ್ಯಾಲಯಗಳಿಗೆ ಮಾನ್ಯತೆ ವಿರೋಧಿಸಿ ಪ್ರತಿಭಟನೆ

Published:
Updated:
ಹಿರಿಯೂರು ತಾಲ್ಲೂಕಿನ ಬಬ್ಬೂರು ಸಮೀಪ ಇರುವ ತೋಟಗಾರಿಕಾ ವಿದ್ಯಾಲಯದ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಶುಕ್ರವಾರ ರಾಜ್ಯದಲ್ಲಿ ಖಾಸಗಿ ಕೃಷಿ ವಿಶ್ವ ವಿದ್ಯಾಲಯಗಳನ್ನು ತೆರೆಯುವುದಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಹಿರಿಯೂರು: ರಾಜ್ಯದಲ್ಲಿ ಖಾಸಗಿ ಕೃಷಿ ವಿಶ್ವ ವಿದ್ಯಾಲಯಗಳನ್ನು ತೆರೆಯುವುದಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ಶುಕ್ರವಾರ ತಾಲ್ಲೂಕಿನ ಬಬ್ಬೂರು ಸಮೀಪ ಇರುವ ತೋಟಗಾರಿಕಾ ಮಹಾವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಮುಖಂಡ ಪವನ್ ಕುಮಾರ್ ಮಾತನಾಡಿ, ‘ಖಾಸಗಿ ಕೃಷಿ ವಿಶ್ವ ವಿದ್ಯಾಲಯಗಳಿಗೆ ಮಾನ್ಯತೆ ನೀಡುವುದರಿಂದ ಕೃಷಿ ಹಾಗು ತೋಟಗಾರಿಕೆ ಪದವಿಗಳು ಈಗಿರುವ ಮೌಲ್ಯವನ್ನು ಕಳೆದುಕೊಳ್ಳುತ್ತವೆ. ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆ. ಎಲ್ಲ ಸೌಲಭ್ಯಗಳಿರುವ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗಿಂತ ಖಾಸಗಿ ವಿ.ವಿಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳು ಸಿಗುತ್ತವೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗುತ್ತದೆ’ ಎಂದು ದೂರಿದರು.

‘ರೈತರ ಕೋಟಾದಲ್ಲಿ ಕೃಷಿ ಪದವಿಗೆ ಸೇರುವ ಮಕ್ಕಳು ಅನ್ಯಾಯಕ್ಕೆ ಒಳಗಾಗಬೇಕಾಗುತ್ತದೆ. ಭವಿಷ್ಯದಲ್ಲಿ ರೈತರು ತಮ್ಮ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಇಂತಹ ವಿಜ್ಞಾನಿಗಳ ಹತ್ತಿರ ಹೋಗಿ ಹಣ ತೆತ್ತು ಸಲಹೆ ಪಡೆಯಬೇಕಾಗುತ್ತದೆ. ಈ ಎಲ್ಲ ಕಾರಣದಿಂದ ಮಾನ್ಯತೆ ನೀಡಬಾರದು ಎಂಬುದು ನಮ್ಮ ಆಗ್ರಹ’ ಎಂದು ಅವರು ತಿಳಿಸಿದರು.

ಹೊಸದಾಗಿ ಯಾವುದೇ ಖಾಸಗಿ ಕೃಷಿ ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ನೀಡಬಾರದು. ಜತೆಗೆ ಪ್ರಸ್ತುತ ಮಾನ್ಯತೆ ನೀಡಿರುವ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿದ್ಯಾಲಯದ ಮುಖ್ಯಸ್ಥ ಡಾ. ಬಸವರಾಜಪ್ಪ ಅವರ ಮೂಲಕ ಕುಲಸಚಿವರಿಗೆ ಬೇಡಿಕೆಯ ಮನವಿ ಪತ್ರವನ್ನು ಮುಖಂಡರಾದ ರಾಕೇಶ್, ವೀರಣ್ಣ, ಮೋಹನ್ ಮನವಿ ಸಲ್ಲಿಸಿದರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !