ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

7

ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Published:
Updated:
Deccan Herald

ಚಿತ್ರದುರ್ಗ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ ಯಾದವ (ಗೊಲ್ಲ) ಸಂಘದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು.

ಗೊಲ್ಲ, ಹೆಳವ, ಉಪ್ಪಾರ, ಬೆಸ್ತರು ಹಾಗೂ ದೊಂಬಿದಾಸರ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಹಾಸ್ಟೆಲ್‌ ವ್ಯವಸ್ಥೆ ಕೋರಿ ಅರ್ಜಿ ಸಲ್ಲಿಸಿದ್ದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಬೆರಳೆಣಿಕೆಯ ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಹಾಸ್ಟೆಲ್‌ ಸೌಲಭ್ಯ ಸಿಗದವರಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಯೇ ಹೆಚ್ಚಾಗಿದೆ. ಹಳ್ಳಿಗಳಿಂದ ನಿತ್ಯ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಸಾರಿಗೆ ಸಂಪರ್ಕ ಕೂಡ ಅಸಮರ್ಪಕವಾಗಿದೆ. ಕಾಲೇಜು ಆರಂಭವಾಗಿ ತಿಂಗಳು ಕಳೆದಿದ್ದು, ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ 2015ರಲ್ಲಿ ಆದೇಶ ನೀಡಿದೆ. ಆದೇಶ ಸಮಪರ್ಕಪವಾಗಿ ಜಾರಿಯಾಗದ ಪರಿಣಾಮ ನ್ಯಾಯಾಲಯದ ಮೊರೆ ಹೋಗಿದ್ದೆವು. ನ್ಯಾಯಾಲಯದ ನಿರ್ದೇಶನದ ಮೇರೆಗೆ 2017ರಲ್ಲಿ ಎರಡು ಹೆಚ್ಚುವರಿ ಹಾಸ್ಟೆಲ್‌ ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್‌ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷ ಸಿ.ಮಹಾಲಿಂಗಪ್ಪ, ಉಪಾಧ್ಯಕ್ಷ ವೆಂಕಟೇಶ್‌ ಯಾದವ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !