ಚಳ್ಳಕೆರೆ: ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಂತೆ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಆಸ್ಪತ್ರೆ ಸಿಬ್ಬಂದಿಗೆ ಸಲಹೆ ಸೂಚಿಸಿದರು.

ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಈಚೆಗೆ ನಡೆದ ಆರೋಗ್ಯ ರಕ್ಷಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಸಣ್ಣ ಪುಟ್ಟ ಕಾಯಿಲೆಗಳಿಗೂ ಖಾಸಗಿ ಮೆಡಿಕಲ್ಗಳಿಗೆ ಚೀಟಿ ಬರೆಯಬಾರದು. ಇಂಜೆಕ್ಷನ್ ಮತ್ತಿತರ ಚಿಕಿತ್ಸೆಗೆ ಹಣ ಪಡೆಯಬಾರದು. ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಣದ ಲೆಕ್ಕಪತ್ರ ನಿರ್ವಹಣೆ ಸರಿಯಾಗಿ ನಿರ್ವಹಿಸಬೇಕು. ಒಳ ರೋಗಿಗಳಿಗೆ ತಯಾರಿಸುವ ಅಡುಗೆ ಶುಚಿ–ರುಚಿಯಾಗಿರಬೇಕು ಎಂದು ಹೇಳಿದರು.

ಆಸ್ಪತ್ರೆಯ ವಾರ್ಡ್ಗಳು, ಶೌಚಾಲಯ, ಶಸ್ತ್ರ ಚಿಕಿತ್ಸಾ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್ ರೇಹಾನ್ ಪಾಷ, ಪೌರಾಯುಕ್ತ ಜಗರೆಡ್ಡಿ, ಆಡಳಿತಾಧಿಕಾರಿ ಡಾ.ಜೆ.ಡಿ.ವೆಂಕಟೇಶ್, ಪಿಎಸ್ಐ ಧರಪ್ಪ ಬಾಳಪ್ಪ ದೊಡ್ಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.