ಸಿರಿಗೆರೆ (ಚಿತ್ರದುರ್ಗ): ಇಲ್ಲಿಗೆ ಸಮೀಪದ ವಿಜಾಪುರ ಗೊಲ್ಲರಹಟ್ಟಿಯ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಹಿರೆಕಂದವಾಡಿ ಗ್ರಾಮದ ಸುಚಿತ್ರಾ (18) ಮೃತಪಟ್ಟ ವಿದ್ಯಾರ್ಥಿನಿ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಸರ್ವಿಸ್ ರಸ್ತೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸದ ಪರಿಣಾಮ ವಿದ್ಯಾರ್ಥಿಗಳು ಮಂಗಳವಾರ ಹೆದ್ದಾರಿ ಬದಿಯಲ್ಲಿ ಬಸ್ಗೆ ಕಾಯುತ್ತಿದ್ದರು. ಹೆದ್ದಾರಿ ಬದಿಯಲ್ಲಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಚಿತ್ರಾ, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದರು.

ಹೆದ್ದಾರಿಯಲ್ಲಿ ಸಾಗುವ ಬಸ್ಗಳು ಗ್ರಾಮದ ಜನರಿಗೆ ಸೇವೆ ಒದಗಿಸುತ್ತಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಬಸ್ ಕೂಡ ಸರ್ವಿಸ್ ರಸ್ತೆಗೆ ಬರುತ್ತಿಲ್ಲ. ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿ ಬಸ್ ಗೆ ಕಾಯುವ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಹೆದ್ದಾರಿಯಲ್ಲಿ ಗ್ರಾಮಸ್ಥರು ಧರಣಿ ಕುಳಿತ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಚಿತ್ರದುರ್ಗ ಹಾಗೂ ದಾವಣಗೆರೆ ನಡುವೆ ಸಂಚರಿಸುವ ವಾಹನಗಳು ಹೆದ್ದಾರಿಯ ಎರಡು ಬದಿಯಲ್ಲಿ ಸಾಲುಗಟ್ಟಿ ನಿಂತಿವೆ. ಭರಮಸಾಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನಕಾರರ ಮನವೊಲಿಸುವ ಪ್ರಯತ್ನ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.