ಚಿತ್ರದುರ್ಗ: ‘ಜಿಲ್ಲೆಯಾದ್ಯಂತ ಡಿ.21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 98,279 ಹಾಗೂ ನಗರದಲ್ಲಿ 28,082 ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಲಾಗಿದೆ’ ಎಂದರು.

‘ತಹಶೀಲ್ದಾರ್ ನೇತೃತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಸೂಕ್ಷ್ಮ ಪ್ರದೇಶಗಳಲ್ಲಿ ವ್ಯವಸ್ಥಿತವಾಗಿ ಪಲ್ಸ್ ಪೋಲಿಯೋ ಬೂತ್ ಕಾರ್ಯಕ್ರಮ ಮಾಡಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಜತೆಗೆ ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜವಾಬ್ದಾರಿಯುತವಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪೋಲಿಯೋದಿಂದ ಉಂಟಾಗುವ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.

‘ಜಿಲ್ಲೆಯಲ್ಲಿ 1091 ಲಸಿಕಾ ಕೇಂದ್ರ, 63 ಟ್ರಾನ್ಸಿಟ್ ಪಾಯಿಂಟ್ ಮತ್ತು 15 ಮೊಬೈಲ್ ತಂಡಗಳ ಮೂಲಕ ಪೋಲಿಯೋ ಲಸಿಕೆ ಹಾಕಲು ಸಿದ್ಧತೆ ಕೈಗೊಳ್ಳಲಾಗಿದೆ. 2,338 ಲಸಿಕಾ ಕಾರ್ಯಕರ್ತರು, 239 ಮೇಲ್ವಿಚಾರಕನ್ನು ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದರು.

‘ಡಿ.21ರಂದು ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 22 ರಿಂದ 24 ರವರೆಗೆ ಮನೆ ಮನೆ ಭೇಟಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ 2021ರಲ್ಲಿ 1,54,572, 2022ರಲ್ಲಿ 1,56,132, 2023ರಲ್ಲಿ 1,55,729 ಹಾಗೂ 2024ರಲ್ಲಿ 1,42,851 ಮಕ್ಕಳಿಗೆ ಲಸಿಕೆ ಹಾಕಲಾಗಿತ್ತು. ಬೂತ್ ಮಟ್ಟದಲ್ಲಿಯೇ ಶೇ 95ರಷ್ಟು ಸಾಧನೆ ಮಾಡಲಾಗಿತ್ತು’ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅಭಿನವ್ ಮಾಹಿತಿ ನೀಡಿದರು.

‘ಪ್ರತಿ ವರ್ಷದಂತೆಯೂ ಈ ಬಾರಿಯೂ ಸಹ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಇದ್ದರು.

ಡಿ.20ರಂದು ಶಾಲಾ ಮಟ್ಟದಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಬೇಕು. ವಿವಿಧ ಇಲಾಖೆಯ ಮುಖ್ಯಸ್ಥರು ತಮ್ಮ ಇಲಾಖೆಯ ವಾಹನಗಳನ್ನು ನಿಗಧಿತ ಸಮಯಕ್ಕೆ ವಾಹನಗಳ ನಿಯೋಜಿಸಬೇಕು.
ಬಿ.ಟಿ.ಕುಮಾರಸ್ವಾಮಿ ಹೆಚ್ಚುವರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.