ಶನಿವಾರ, ಡಿಸೆಂಬರ್ 5, 2020
25 °C

ಯಾದವ ಮಹಾಸಭಾಗೆ ಪೂರ್ಣಿಮಾ ಶ್ರೀನಿವಾಸ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಖಿಲ ಭಾರತ ಯಾದವ ಮಹಾ
ಸಭಾ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

‘ಘಾಜಿಯಾಬಾದ್‌ನ ಶ್ರೀಕೃಷ್ಣಭವನದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನ. 5ರಂದು ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ ಪ್ರಕಟಿಸಿದೆ. ಮಹಿಳಾ ವಿಭಾಗದ ಅಧ್ಯಕ್ಷೆಯನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ’ ಎಂದು ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.

‘ದೇಶದಲ್ಲಿ ಯಾದವ ಸಮುದಾಯದ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗಳು, ಅವುಗಳ ಪರಿಹಾರಕ್ಕೆ ಬೇಕಿರುವ ಕ್ರಮಗಳು, ಶೈಕ್ಷಣಿಕವಾಗಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೂ ಸೇರಿ ಸಮುದಾಯದ ಸಂಘಟನೆಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.