ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜೃಂಭಣೆಯ ರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ

Published 21 ಆಗಸ್ಟ್ 2024, 16:29 IST
Last Updated 21 ಆಗಸ್ಟ್ 2024, 16:29 IST
ಅಕ್ಷರ ಗಾತ್ರ

ಹೊಸದುರ್ಗ: ಪಟ್ಟಣದ ಹುಳಿಯಾರು ರಸ್ತೆಯಲ್ಲಿನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಎರಡು ದಿನಗಳಿಂದ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ.

ಬುಧವಾರವೂ ಸಾವಿರಾರು ಜನರು ಭಾಗವಹಿಸಿ, ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಆಂಜನೇಯ ಸ್ವಾಮಿ ಮತ್ತು ಗುರು ರಾಘವೇಂದ್ರ ಸಾರ್ವಭೌಮರ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಮತ್ತು ಮಹಾಮಂಗಳಾರತಿ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಮಹಾನೈವೇದ್ಯ, ಹಸ್ತೋದಕ ಮತ್ತು ಅಲಂಕಾರ ಸೇವೆ ನಡೆಯಿತು. ರಾತ್ರಿ ಪ್ರಕಾರೋತ್ಸವ, ಅಷ್ಟಾವಧಾನ ಹಾಗೂ ಮಹಾಮಂಗಳಾರತಿ ನಡೆಯಿತು. ಗುರುವಾರ ಉತ್ತರಾಧನೆ ಕಾರ್ಯಕ್ರಮ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT