ಮಂಗಳವಾರ, ಸೆಪ್ಟೆಂಬರ್ 29, 2020
23 °C
ಮುಖ್ಯಮಂತ್ರಿಗೆ ಎಂಎಲ್‌ಸಿ ರಘು ಆಚಾರ್‌ ಪತ್ರ

ಕೊರೊನಾ ವಾರಿಯರ್ಸ್‌ ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕೋವಿಡ್‌–19 ತಗುಲಿ ಮೃತಪಟ್ಟ ಕೊರೊನಾ ವಾರಿಯರ್ಸ್‌ಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ವಿಧಾನಪರಿಷತ್‌ ಸದಸ್ಯ ಜಿ.ರಘು ಆಚಾರ್ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ವೈದ್ಯ ಡಾ.ಎಚ್‌.ಆರ್‌.ಸುನೀಲ್‌ ಕುಮಾರ್‌ ಹಾಗೂ ಗುತ್ತಿಗೆ ನೌಕರ ಎಂ.ಆನಂದ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ಕುಟುಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ’ ಎಂದು ಪತ್ರದಲ್ಲಿ ಆಚಾರ್‌ ಬೇಸರ ವ್ಯಕ್ತಪಡಿಸಿದ್ದಾರೆ.

‘ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ವಾರಿಯರ್ಸ್‌ಗೆ ಪರಿಹಾರ ಸಿಕ್ಕಿದೆ. ಚಿತ್ರದುರ್ಗ ಸೇರಿ ಇತರೆಡೆ ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ ಮಾತ್ರ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ. ಈ ತಾರತಮ್ಯ ನೀತಿಯನ್ನು ಸರ್ಕಾರ ಏಕೆ ಅನುಸರಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.

‘ಪರಿಹಾರ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬದಿಂದ ಸಂತ್ರಸ್ತರ ಕುಟುಂಬ ಸಮಸ್ಯೆ ಅನುಭವಿಸುತ್ತಿದೆ. ಈ ಅನ್ಯಾಯವನ್ನು ಸಹಿಸುವುದಿಲ್ಲ. ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು