ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಗೋವಿಂದ ಕಾರಜೋಳ ಪರ ನಟಿ ರಾಗಿಣಿ ರೋಡ್ ಶೋ

Published 22 ಏಪ್ರಿಲ್ 2024, 16:29 IST
Last Updated 22 ಏಪ್ರಿಲ್ 2024, 16:29 IST
ಅಕ್ಷರ ಗಾತ್ರ

ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ನಟಿ ರಾಗಿಣಿ ಸೋಮವಾರ ರೋಡ್‌ ಶೋ ನಡೆಸಿದರು.

ಚಿತ್ರದುರ್ಗ ರಸ್ತೆಯ ವಾಲ್ಮೀಕಿ ವೃತ್ತದಿಂದ ನೆಹರೂ ವೃತ್ತದವರೆಗೆ ರೋಡ್ ಶೋ ನಡೆಯಿತು. ನಟಿಯನ್ನು ನೋಡಲು ವಿವಿಧ ವಾರ್ಡ್‍ಗಳಿಂದ ನೂರಾರು ಮಹಿಳೆಯರು ಬಂದಿದ್ದರು.  

ಜೆಡಿಎಸ್‌ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಅಭ್ಯರ್ಥಿ ಕಾರಜೋಳ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು.

ಬಿಜೆಪಿ ಮಂಡಲದ ತಾಲ್ಲೂಕು ಘಟಕದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಾಲುವೆಹಳ್ಳಿ ಜಯಪಾಲಯ್ಯ, ಜೆಡಿಎಸ್ ಮುಖಂಡ ಎಂ.ರವೀಶ್‍ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿದ್ದಾಪುರ ಚೆನ್ನಿಗರಾಮಯ್ಯ, ನಗರಸಭೆ ಸದಸ್ಯ ಪ್ರಮೋದ್, ಜಯಣ್ಣ, ಮುಖಂಡ ಕೆ.ಟಿ.ಕುಮಾರಸ್ವಾಮಿ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ರೋಡ್ ಶೋ ನಡೆಸಿದ ನಟಿ ರಾಗಿಣಿ 
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ರೋಡ್ ಶೋ ನಡೆಸಿದ ನಟಿ ರಾಗಿಣಿ 
ನಟಿ ರಾಗಿಣಿಯನ್ನು ನೋಡಲು ಸೇರಿದ್ದ ಮಹಿಳೆಯರು 
ನಟಿ ರಾಗಿಣಿಯನ್ನು ನೋಡಲು ಸೇರಿದ್ದ ಮಹಿಳೆಯರು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT