ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ರಘು ಆಚಾರ್ ಒತ್ತಾಯ
₹ 10 ಕೋಟಿ ಪರಿಹಾರ ನೀಡಿ: ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ರಘು ಆಚಾರ್ ಒತ್ತಾಯ

ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಸುರಿದ ಅಕಾಲಿಕ ಮಳೆಯಿಂದಾಗಿ ವಿವಿಧೆಡೆ ಹಾನಿಯಾಗಿದೆ. ಪರಿಹಾರ ಕಾರ್ಯಕ್ಕೆ ಸರ್ಕಾರ ಕೂಡಲೇ ₹10 ಕೋಟಿ ಪರಿಹಾರ ನೀಡಬೇಕು’ ಎಂದು ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದಿದ್ದಾರೆ.
‘ತಾಲ್ಲೂಕಿನ ಸಜ್ಜನಕೆರೆ ಹಾಗೂ ಮಲ್ಲಾಪುರ ಕೆರೆ ಕೋಡಿ ಬಿದ್ದಿವೆ. ಇದರಿಂದಾಗಿ ಗ್ರಾಮಗಳ ಕೆಲ ಮನೆಗಳಿಗೂ ನೀರು ನುಗ್ಗಿದೆ. ಭಾರಿ ಪ್ರಮಾಣದ ಮಳೆಯಿಂದಾಗಿ ಹತ್ತಾರು ಮನೆಗಳು ಕುಸಿದಿವೆ. ಕೆಲವೆಡೆ ಗೋಡೆಗಳಿಗೂ ಹಾನಿಯಾಗಿದೆ. ತೋಟ, ಜಮೀನುಗಳಿಗೆ ನೀರು ನುಗ್ಗಿ ನೂರಾರು ಎಕರೆ ಬೆಳೆಗೆ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.