ಸೋಮವಾರ, ಮೇ 10, 2021
21 °C
ಚುನಾವಣೆ ಫಲಿತಾಂಶಕ್ಕೆ ರೈತ ಸಂಘದ ಪ್ರತಿಕ್ರಿಯೆ

ಬಿಜೆಪಿಗೆ ಬರೆ ಎಳೆಯುವ ದಿನ ದೂರವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದಾರ ಹಕ್ಕು ಚಲಾವಣೆ ಮಾಡಿದ್ದು, ರೈತ ಹೋರಾಟದ ಫಲ. ಇನ್ನಾದರೂ ರೈತ ವಿರೋಧಿ ಕಾನೂನು ಹಿಂಪಡೆಯಿರಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೇಂದ್ರದ ರೈತ ವಿರೋಧಿ ಕಾನೂನುಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಬಿಜೆಪಿಗೆ ಇನ್ನಾದರೂ ಇದರ ಅರಿವು ಆಗಬೇಕಿದೆ. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧ ಮಾಡಬೇಕಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ರಸಗೊಬ್ಬರದ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇಂಧನ ಬೆಲೆ ಹೆಚ್ಚಳವಾಗಿದ್ದು, ಟ್ರ್ಯಾಕ್ಟರ್‌ ಉಳುಮೆ ವೆಚ್ಚದಾಯಕ ಆಗುತ್ತಿದೆ. ಪೈಪು, ಪಂಪ್‌ಸೆಟ್‌ಗಳ ಬೆಲೆಯೂ ಏರಿಕೆಯಾಗಿದೆ. ಕೃಷಿಯ ವೆಚ್ಚ ಇಮ್ಮಡಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಜನಾಭಿ‍ಪ್ರಾಯ ವ್ಯಕ್ತವಾಗಿದೆ. ರಾಜ್ಯದ ರೈತರು ಬಿಜೆಪಿಗೆ ಬರೆ ಎಳೆಯುವ ದಿನ ದೂರವಿಲ್ಲ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು