ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ ಮಹಿಳೆ ಸುಮಂಗಲಮ್ಮ ಇನ್ನಿಲ್ಲ

Last Updated 23 ಜೂನ್ 2021, 8:51 IST
ಅಕ್ಷರ ಗಾತ್ರ

ಮೊಳಕಾಲ್ಮೂರು (ಚಿತ್ರದುರ್ಗ): ಟ್ರ್ಯಾಕ್ಟರ್ ಚಾಲನಾ ಪರವಾನಗಿ ಪಡೆದು ಜಮೀನು ಉಳುಮೆ ಮಾಡಿದ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೃಷಿ ಮಹಿಳೆ ಎಸ್.ವಿ.ಸುಮಂಗಲಮ್ಮ (69) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು.

ಇವರಿಗೆ ಪತಿ ವೀರಭದ್ರಪ್ಪ, ಪುತ್ರ ಹಾಗೂ ಪುತ್ರಿ ಇದ್ದಾರೆ. ತೋಟದಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಸುಮಂಗಲಮ್ಮ ಮತ್ತು ವೀರಭದ್ರಪ್ಪ ದಂಪತಿ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಮಾರು 70 ಎಕರೆ ಒಣ ಭೂಮಿಯಲ್ಲಿ ತೆಂಗಿನ ತೋಟ ನಿರ್ಮಿಸಿ ಮಾದರಿಯಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿದ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ತೆಂಗಿನ ಮರದಿಂದ ನೀರಾ ಇಳಿಸಿ ಇದಕ್ಕೆ ಬ್ರಾಂಡ್ ಸ್ವರೂಪ ನೀಡಿದ್ದಾರೆ. ರೇಷ್ಮೆ ಕೃಷಿಯ ಮಾದರಿಗಳನ್ನು ರೈತರ ಮುಂದೆ ಇಟ್ಟಿದ್ದಾರೆ. ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡ ಪರಿ ಅಪರೂಪ. ರಾಜ್ಯದ ಹಲವು ಜಿಲ್ಲೆಗಳಿಂದ ಜನರು ವೀಕ್ಷಿಸಲು ತೋಟಕ್ಕೆ ಬರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT