ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಈಚೆಗೆ ಯರಿಸ್ವಾಮಿ ಎಂಬುವವರ ಮನೆಯಲ್ಲಿ ನಡೆದಿದ್ದ ಕಳವು ಘಟನೆ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗದ ಪೀಟ್ಲ ಗಂಗಾಧರ್ ಎಂದು ಗುರುತಿಸಲಾಗಿದೆ. ಈತನಿಂದ ರೂ 13 ಲಕ್ಷ ಬೆಲೆಬಾಳುವ 138 ಗ್ರಾಂ ನಷ್ಟು ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನು ರಾಜ್ಯ ಮತ್ತು ಆಂಧ್ರಪ್ರದೇಶದಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳೀಯ ಠಾಣೆ ಸಿಪಿಐ ಆರ್. ನಾಗರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಸಿಬ್ಬಂದಿಗಳಾದ ಅನ್ವರ್ ಭಾಷಾ, ವೀರಣ್ಣ ಗೊಣಪೆ, ಶಶಿಧರ್ ತಂಡದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.