ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: 10 ವರ್ಷ ಜೈಲು

Published 7 ಫೆಬ್ರುವರಿ 2024, 16:19 IST
Last Updated 7 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಆರೋಪ ಸಾಬೀತಾಗಿದ್ದು, ಅಪರಾಧಿ ಮಲ್ಲಿಕಾರ್ಜುನ ಎಂಬಾತನಿಗೆ 10 ವರ್ಷ ಕಠಿಣ ಜೈಲು ಹಾಗೂ ₹ 50 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಚಳ್ಳಕೆರೆ ತಾಲ್ಲೂಕಿನ ಕಾರ್ತಿಕೇನಹಟ್ಟಿಯ ಮಲ್ಲಿಕಾರ್ಜುನ ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಬುಧವಾರ ಆದೇಶ ಪ್ರಕಟಿಸಿದರು. ಸಂತ್ರಸ್ತ ಬಾಲಕಿಗೆ ₹ 4.5 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ಬಾಲಕಿಯನ್ನು ಪುಸಲಾಯಿಸಿ ಚಳ್ಳಕೆರೆ ನಗರಕ್ಕೆ ಕರೆದೊಯ್ದ ಮಲ್ಲಿಕಾರ್ಜುನ ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ದೂರು ದಾಖಲಿಸಿಕೊಂಡ ಚಳ್ಳಕೆರೆ ಠಾಣೆಯ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ವಕೀಲ ಎಚ್‌.ಆರ್. ಜಗದೀಶ್‌ ಸರ್ಕಾರದ ಪರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT