ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಶುಕ್ರವಾರ ರಾತ್ರಿಯಿಂದ ನೀರು ಹರಿಸಲಾಗುತ್ತಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಪ್ರಕಟಣೆ ತಿಳಿಸಿದೆ.

ಅಚ್ಚುಕಟ್ಟು ಪ್ರದೇಶದಲ್ಲಿನ ತೆಂಗು, ಅಡಿಕೆ, ಶೇಂಗಾ, ಮೆಕ್ಕೆಜೋಳ ಬೆಳೆಗಳಿಗೆ ನೀರಿನ ಅಗತ್ಯ ಇರುವ ಬಗ್ಗೆ ರೈತರು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು, ಫೆಬ್ರುವರಿ 7ರಿಂದ 30 ದಿನಗಳವರೆಗೆ ನೀರು ಹರಿಸಲಾಗುವುದು. ಪ್ರಸ್ತುತ ಜಲಾಶಯದಲ್ಲಿ 130 ಟಿಎಂಸಿ ಅಡಿ ನೀರಿದ್ದು, 12,155 ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಸಲಾಗುವುದು ಎಂದು ತಿಳಿಸಿದೆ.

ಅಚ್ಚುಕಟ್ಟುದಾರರು ನೀರಾವರಿ ಇಲಾಖೆ ಸೌಡಿಗಳ ಜತೆ ಸೌಜನ್ಯದಿಂದ ವರ್ತಿಸಬೇಕು. ನಿಯಮ ಮೀರಿ ನೀರನ್ನು ಉಪಯೋಗಿಸಿದರೆ, ಕಾಲುವೆಗಳ ಗೇಟುಗಳನ್ನು ಬಲವಂತದಿಂದ ಕಿತ್ತರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.