ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯ ಆರೋಗ್ಯ ಸಚಿವರಾಗಿದ್ದರೆ ಚೆನ್ನಾಗಿತ್ತು: ಜೆಡಿಎಸ್ ಮುಖಂಡ ಶ್ಲಾಘನೆ

Last Updated 6 ಜೂನ್ 2021, 5:15 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೋವಿಡ್ ವೇಳೆ ಸೋಂಕಿತರ ಮನೆ ಮಗನಂತೆ ಆತ್ಮಸ್ಥೈರ್ಯ ತುಂಬಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಕಾರ್ಯವೈಖರಿ ಮೆಚ್ಚುವಂಥದ್ದು ಎಂದು ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ ತಿಳಿಸಿದ್ದಾರೆ.

‘ಆರೋಗ್ಯ ಸಚಿವ ಡಾ. ಸುಧಾಕರ್ ಕೂಡ ಇವರಷ್ಟು ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ರೇಣುಕಾಚಾರ್ಯ ಅವರನ್ನು ಆರೋಗ್ಯ ಸಚಿವರನ್ನಾಗಿ ಮಾಡಿದರೆ ರಾಜ್ಯದಾದ್ಯಂತ ಪ್ರವಾಸ ಮಾಡಿ ಕೋವಿಡ್ ಹತೋಟಿಗೆ ತರುವುದರ ಜತೆಗೆ ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದರು’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಕೊಂಚ ಓಡಾಡಿಕೊಂಡು ಕೆಲಸ ಮಾಡುತ್ತಿದ್ದಾರೆ. ಉಳಿದವರು ಪತ್ರಿಕಾ ಹೇಳಿಕೆಗಳಿಗೆ ಸೀಮಿತರಾಗಿದ್ದಾರೆ. ಎಲ್ಲ ಜನಪ್ರತಿನಿಧಿಗಳು ಮೈಚಳಿ ಬಿಟ್ಟು ಅಖಾಡಕ್ಕೆ ಧುಮುಕಿದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಾರೆ. ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT