ಬುಧವಾರ, ಮೇ 18, 2022
25 °C
ಧ್ವಜಾರೋಹಣ ನೆರವೇರಿಸಿದ ಸಚಿವ

ಸುಧಾರಣೆಯತ್ತ ರೈತರ ಬದುಕು, ಸಂತಸದ ದಿನಗಳು ಬರುತ್ತಿವೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ರೈತರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ರೈತರಿಗೆ ಸಂತಸದ ದಿನಗಳು ಬರುತ್ತಿವೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ₹ 1 ಲಕ್ಷ ಕೋಟಿಯನ್ನು ಮೀಸಲು ಇಟ್ಟಿದೆ. ಆಹಾರ ಸಂಸ್ಕರಣೆಗೆ ಹತ್ತು ಸಾವಿರ ಕೋಟಿ ನೀಡಲಾಗಿದೆ. ಇದು ರೈತರ ಬದುಕನ್ನು ಹಸನ ಮಾಡಲಿದೆ ಎಂದು ಹೇಳಿದರು.

ಕೋವಿಡ್ ಕಾಲದಲ್ಲಿಯೂ ದೇಶದ ಆರ್ಥಿಕ ಸ್ಥಿತಿ ಹಾಳಾಗದಂತೆ ನೋಡಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ. ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ವಿದ್ಯಾನಿಧಿ ಮೂಲಕ ರೈತ ಮಕ್ಕಳ ವ್ಯಾಸಂಗಕ್ಕೆ ನೆರವು ನೀಡಲಾಗುತ್ತಿದೆ ಎಂದರು

1985 ರಿಂದ 1994ರ ವರೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಸೆಲ್ಯೂಟ್ ಹೊಡೆಯುತ್ತಿದ್ದ ಇದೇ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಯೋಗ ನನ್ನದು. ಜನರ ಆಶೀರ್ವಾದದಿಂದ ಚಿತ್ರರಂಗದಿಂದ ರಾಜಕೀಯಕ್ಕೆ ಬಂದು ಈ ಹಂತದವರೆಗೆ ಬೆಳಲೆಯಲು ಸಾಧ್ಯವಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು