ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಆಗ್ರಹ

Last Updated 30 ಸೆಪ್ಟೆಂಬರ್ 2020, 4:10 IST
ಅಕ್ಷರ ಗಾತ್ರ

ಹೊಳಲ್ಕೆರೆ: ಶತಮಾನಗಳಿಂದ ತುಳಿತಕ್ಕೆ ಒಳಗಾಗಿರುವ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

‘ಹೊಲೆ ಮಾದಿಗರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಈ ತಳ ಸಮುದಾಯ ಮೇಲೆ ಬರಲು ಒಳ ಮೀಸಲಾತಿಯ ಅಗತ್ಯವಿದೆ. 2005ರಲ್ಲಿ ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ಮೀಸಲಾತಿ ತಾರತಮ್ಯದ ಬಗ್ಗೆ ವರದಿ ನೀಡಲು ಸದಾಶಿವ ಆಯೋಗವನ್ನು ನೇಮಿಸಿತು. ಈ ಆಯೋಗವು ಆರೂವರೆ ವರ್ಷ ಅಧ್ಯಯನ ನಡೆಸಿ 2012ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತು. ಆದರೆ, ಇದುವರೆಗೆ ಬಂದ ಸರ್ಕಾರಗಳು ಈ ವರದಿಯ ಬಗ್ಗೆ ಚರ್ಚೆ ನಡೆಸಿಲ್ಲ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ಡಿ.ಆರ್.ಪಾಂಡುರಂಗ ಸ್ವಾಮಿ, ಸಂಘಟನಾ ಸಂಚಾಲಕ ಕಸ್ತೂರಪ್ಪ, ತಾಲ್ಲೂಕು ಸಂಚಾಲಕ ಮಂಜು ದಾಸಿಕಟ್ಟೆ, ಶಿವಕುಮಾರ್, ಹಾಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT