ಬುಧವಾರ, ಅಕ್ಟೋಬರ್ 28, 2020
23 °C

ಚಿತ್ರದುರ್ಗವನ್ನು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸಲು ಮನವಿ: ಬಿ. ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಚಿತ್ರದುರ್ಗ ಜಿಲ್ಲೆಯನ್ನು ಪ್ರವಾಹ ಪೀಡಿತ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜತೆ ನಾನು ಮತ್ತು ನಮ್ಮ ಜಿಲ್ಲೆಯ ಎಲ್ಲ ಶಾಸಕರೂ ಚರ್ಚೆ ಮಾಡುತ್ತೇವೆ’ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಿ. ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

‘ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಮತ್ತು ಇತರೆ ಬೆಳೆಗಳು ಮಳೆಯಿಂದ ನಾಶವಾಗಿ ರೈತರಿಗೆ ಭಾರಿ ನಷ್ಟವಾಗಿದೆ. ಈವರೆಗೂ ಸುಮಾರು 7,302 ಹೆಕ್ಟರ್ ಪ್ರದೇಶದಲ್ಲಿ ₹ 9.87 ಕೋಟಿ ಮೊತ್ತದಷ್ಟು ನಷ್ಟವಾಗಿದೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ’ ಎಂದಿದ್ದಾರೆ.

‘ಜನ, ಜಾನುವಾರು ಮತ್ತು ಮೂಲಸೌಕರ್ಯ ಸೇರಿದಂತೆ ಅಂದಾಜು ₹ 91.87 ಕೋಟಿಯ ನಷ್ಟವಾಗಿದೆ ಎಂದು ತಿಳಿದಿದ್ದು, ನಷ್ಟ ಹೊಂದಿರುವ ಯಾವುದೇ ರೈತನೂ ಬೆಳೆ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲಾಗುವುದು. ನಮ್ಮ ಸರ್ಕಾರ ರೈತರ ಜೊತೆಗಿದ್ದು, ಯಾರೂ ಧೃತಿಗೆಡಬೇಕಿಲ್ಲ’ ಎಂದೂ ರೈತರಲ್ಲಿ ಧೈರ್ಯ ತುಂಬಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು