ಬುಧವಾರ, ಅಕ್ಟೋಬರ್ 28, 2020
29 °C

ಹಕ್ಕುಪತ್ರ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ಭೂಮಿ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಆರೋಪಿಸಿದರು.

ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಬಗರ್‌ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವಂತೆ ಆಗ್ರಹಿಸಿ ಯಲ್ಲದಕೆರೆ ಗ್ರಾಮದಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ಶನಿವಾರ ತಾಲ್ಲೂಕು ಕಚೇರಿ ಬಳಿ ಸ್ವಾಗತಿಸಿ ಮಾತನಾಡಿದರು.

ಅಧಿಕಾರಿಗಳು ಮತ್ತು ರಾಜಕಾರಣಿಗಳು ಉಳ್ಳವರ ಪರವಾಗಿ ಕಾನೂನು ರೂಪಿಸಿ, ನಿಜವಾದ ಭೂಮಾಲೀಕರನ್ನು ಗೋಳಾಡಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪಾದಯಾತ್ರೆಯಂತಹ ಗಾಂಧಿ ಮಾರ್ಗದ ಹೋರಾಟದ ಹಾದಿ ಹಿಡಿಯಲಾಗಿದೆ ಎಂದರು.

ಬಿಡಿಎಸ್ ರಾಜ್ಯಾಧ್ಯಕ್ಷ ಡಾ. ಪ್ರಕಾಶ್ ಬಿರಾದಾರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಭೂಮಿ ಹಕ್ಕುದಾರರ ಜಿಲ್ಲಾ ಸಂಚಾಲಕ ರೂಪ ನಾಯಕ ಮಾತನಾಡಿದರು.

ಬಳಿಕ ಉಪವಿಭಾಗಾಧಿಕಾರಿ ಪ್ರಸನ್ನ ಅವರಿಗೆ ಮನವಿ ಸಲ್ಲಿಸಲಾಯಿತು.

ಭೂ ಹಕ್ಕುದಾರರ ವೇದಿಕೆ ಅಧ್ಯಕ್ಷ ಹುಲಗಲಕುಂಟೆ ರಂಗಸ್ವಾಮಿ, ಕಾರ್ಯದರ್ಶಿ ಜಯಣ್ಣ, ದೊಡ್ಡಘಟ್ಟ ಕುಮಾರ್, ತಿಮ್ಮರಾಜ್, ಶಶಿಕಲಾ, ಲೋಕಮ್ಮ, ವಿಠ್ಠಲ, ಪಾಂಡುರಂಗ, ರಾಮಚಂದ್ರ ಕಸವನಹಳ್ಳಿ, ನರಸಿಂಹಯ್ಯ, ವಿಜಯಣ್ಣ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.