ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಮೀಸಲಾತಿ; 20ರಂದು ಪ್ರತಿಭಟನೆ

Last Updated 16 ಮೇ 2022, 2:51 IST
ಅಕ್ಷರ ಗಾತ್ರ

ಹಿರಿಯೂರು:ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪರಿಶಿಷ್ಟ ಜಾತಿ, ಪಂಗಡದ ಮುಖಂಡರ ಸಭೆ ನಡೆಯಿತು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತು ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಅವರು ನಡೆಸುತ್ತಿರುವ ಧರಣಿ 100ನೇ ದಿನಕ್ಕೆ ಕಾಲಿಡುತ್ತಿರುವ ಕಾರಣ ಅವರಿಗೆ ಬೆಂಬಲ ಸೂಚಿಸಲು ಮೇ 20ರಂದು ಪಟ್ಟಣದಲ್ಲಿ ಸಾಂಕೇತಿಕ ಪ್ರತಿಭಟನೆನಡೆಸಲು ಸಭೆ ನಿರ್ಣಯಿಸಿತು.

ರಂಜಿತ್ ಹೋಟೆಲ್ ಮುಂಭಾಗದಿಂದ ಮೆರವಣಿಗೆ ಆರಂಭಿಸಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಪೂರಕವಾಗಿ ನಾಳೆಯಿಂದ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿನ ತಳ ಸಮುದಾಯಗಳ ಮುಖಂಡರನ್ನುಸಂಪರ್ಕಿಸಿ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚು ಜನರು ಸೇರುವಂತೆ ಮಾಡಬೇಕಿದೆ. ಈ ಮೂಲಕ ಸರ್ಕಾರಕ್ಕೆ ಒತ್ತಡ ತರಬೇಕು ಎಂದು ಕ್ರಿಯಾ ಸಮಿತಿಅಧ್ಯಕ್ಷ ವದ್ದಿಕೆರೆ ಕಾಂತರಾಜ್ ಹೇಳಿದರು.

ಆದಿಜಾಂಬವ ಮಠದ ಷಡಾಕ್ಷರಿ ಮುನಿ ಸ್ವಾಮೀಜಿ, ‘ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ’ ಎಂದು ಹೇಳಿದರು.

ಮುಖಂಡರಾದ ಟಿ.ಡಿ. ರಾಜಗಿರಿ, ವಕೀಲ ರಂಗಸ್ವಾಮಿ, ಕಸವನಹಳ್ಳಿ ರಮೇಶ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿಸದಸ್ಯರಾದ ಶಿವಪ್ಪ, ರಾಜೇಶ್ವರಿ, ಜೈಶೀಲ ನಾಯ್ಕ್, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT