ಬುಧವಾರ, ಅಕ್ಟೋಬರ್ 27, 2021
21 °C
ಮುಖ್ಯಮಂತ್ರಿಗೆ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮನವಿ

ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ‘ಉಪ್ಪಾರ ಸಮುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ.

‘ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿ ಅನುದಾನ ಮೀಸಲಿಡಬೇಕು. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ಹತ್ತಿರ ಭಗೀರಥ ಮೂರ್ತಿ ಸ್ಥಾಪಿಸುವುದರ ಜತೆಗೆ ‘ಭಗೀರಥ ವೃತ್ತ’ ಎಂದು ನಾಮಕರಣ ಮಾಡಬೇಕು. ಜತೆಗೆ ಉಪ್ಪಾರ ಭವನ ನಿರ್ಮಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ಉಪ್ಪಾರ ವಿದ್ಯಾರ್ಥಿನಿಲಯ ಕಾಮಗಾರಿಗೆ ₹ 2 ಕೋಟಿ ಅನುದಾನ ನೀಡಬೇಕು. ರಾಜ್ಯದ ವಿವಿಧೆಡೆ ನಿವೇಶನ ಮುಂಜೂರು ಮಾಡಿ ಸಮುದಾಯ ಭವನ ನಿರ್ಮಿಸಬೇಕು’ ಎಂದು ಕೋರಿದ್ದಾರೆ.

‘ಭಗೀರಥ ಜಯಂತ್ಯುತ್ಸವ, ಭಗೀರಥ ದೇಗುಲ ನಿರ್ಮಾಣ, ಸಭಾ ಮಂಟಪ, ಭೋಜನ ಶಾಲೆ, ವಿದ್ಯಾರ್ಥಿನಿಲಯ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಹೊಸದುರ್ಗದ ಭಗೀರಥ ಗುರುಪೀಠಕ್ಕೆ ಬರಬೇಕು’ ಎಂದು ಅಹ್ವಾನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು