ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಕಿತ್ತುಕೊಳ್ಳುವ ಹುನ್ನಾರ

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ
Last Updated 17 ಫೆಬ್ರುವರಿ 2020, 6:01 IST
ಅಕ್ಷರ ಗಾತ್ರ

ಚಿತ್ರದುರ್ಗ: ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಈಚೆಗೆ ತೀರ್ಪು ನೀಡಿದೆ. ಇದನ್ನು ಆಧಾರವಾಗಿ ಇಟ್ಟುಕೊಂಡು ಮೀಸಲಾತಿ ತೆಗೆದು ಹಾಕಿದರೂ ಅಚ್ಚರಿಯಿಲ್ಲ. ಅಂತಹದೊಂದು ಹುನ್ನಾರ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.

ಇಲ್ಲಿನ ರಂಗಯ್ಯನಬಾಗಿಲು ಸಮೀಪದ ಕುರುಬರ ಹಾಸ್ಟೆಲ್‌ ಸಭಾಂಗಣದಲ್ಲಿ ಭಾನುವಾರ ನಡೆದ ಹಿಂದುಳಿದ ಜಾತಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸಾಮಾಜಿಕ ನ್ಯಾಯದಡಿ ಹಿಂದುಳಿದ ಜಾತಿಗೆ ಮೀಸಲಾತಿ ಕಲ್ಪಿಸ
ಲಾಗಿದೆ. ಡಾ.ಬಿ.ಆರ್. ಅಂಬೇಡ್ಕರ್‌ ಆಶಯದಂತೆ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಇಂತಹ ಮೀಸಲಾತಿ ಸೌಲಭ್ಯ ಕಿತ್ತುಕೊಳ್ಳುವ ಆತಂಕ ಕಾಡುತ್ತಿದೆ. ಹಿಂದುಳಿದ ವರ್ಗಗಳ ರಕ್ಷಣೆಯ ದೃಷ್ಟಿಯಿಂದ ಸಂಘಟಿತರಾಗುವ ಅಗತ್ಯತೆ ಇದೆ’ ಎಂದು ಅಭಿಪ್ರಾಯಪಟ್ಟರು.

‘ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನಕ್ಕೆ ಕೊಕ್ಕೆ ಹಾಕಲಾಗಿದೆ. 1ರಿಂದ ಎಸ್ಸೆಸ್ಸೆಲ್ಸಿವರೆಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ಸ್ಥಗಿತಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಿಂದುಳಿದ ಜಾತಿಗಳಿಗೆ ಬೆಂಗಳೂರಿನಲ್ಲಿ ನೀಡಿದ್ದ ಜಮೀನು ಕಿತ್ತುಕೊಳ್ಳಲಾಗಿದೆ’ ಎಂದು ಆರೋಪಿಸಿದರು.

ಖಜಾಂಚಿ ವಿ.ಜೆ.ಬದ್ರಿನಾಥ್‌, ‘ಹಿಂದುಳಿದ ಸಮುದಾಯ ಒಗ್ಗೂಡಲು ಇದು ಸಕಾಲ. ಸಂಘಟನೆ ಆಗದೇ ಇದ್ದರೆ ಮುಂದಿನ ಪೀಳಿಗೆ ತೊಂದರೆ ಅನುಭವಿಸಲಿದೆ. ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರ ಕಂಡುಕೊಳ್ಳಬೇಕಿದೆ. ಹೀಗಾಗಿ, ರಾಜ್ಯದ ಎಲ್ಲೆಡೆ ಸಂಚರಿಸಿ ಸಂಘಟನೆ ಬಲಪಡಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಕಾರ್ಯದರ್ಶಿ ರಾಮಕೃಷ್ಣಪ್ಪ, ಕುರುಬರ ಸಮಾಜದ ಮುಖಂಡರಾದ ಬಿ.ಟಿ. ಜಗದೀಶ್, ಕುಮಾರ್ ಗೌಡ, ಸವಿತ ಸಮಾಜದ ಮುಖಂಡರಾದ ಎನ್.ಚಂದ್ರಶೇಖರ್, ಎನ್.ಡಿ.ಕುಮಾರ್, ವಿಶ್ವಕರ್ಮ ಸಮಾಜದ ಮುಖಂಡ ಶಿವಣ್ಣಾಚಾರ್, ಯಾದವ ಸಮುದಾಯದ ಆನಂದ್, ಸಿ.ಶಿವು ಯಾದವ್, ದೇವಾಂಗ ಸಮಾಜದ ಅಧ್ಯಕ್ಷ ಗೋವಿಂದಪ್ಪ, ಮಡಿವಾಳ ಸಮಾಜದ ರಾಮಕೃಷ್ಣಪ್ಪ, ಆರ್ಯ ಈಡಿಗ ಸಮಾಜದ ಲಕ್ಷ್ಮಿಕಾಂತ್ ಲಿಂಗಾವರಹಟ್ಟಿ, ಜೋಗಿ ಸಮಾಜದ ಓ. ಪ್ರತಾಪ್ ಜೋಗಿ, ಬಾವಸಾರ ಸಮಾಜದ ಸೀತಾರಾಮ್, ಉಪ್ಪಾರ ಮುಖಂಡ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT