ಚಿತ್ರದುರ್ಗ: ಗೂಡ್ಸ್‌ ವಾಹನ ಪಲ್ಟಿಯಾಗಿ 16 ವಿದ್ಯಾರ್ಥಿಗಳಿಗೆ ಗಾಯ

7

ಚಿತ್ರದುರ್ಗ: ಗೂಡ್ಸ್‌ ವಾಹನ ಪಲ್ಟಿಯಾಗಿ 16 ವಿದ್ಯಾರ್ಥಿಗಳಿಗೆ ಗಾಯ

Published:
Updated:

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಚೌಳೂರು ಗ್ರಾಮದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಗೂಡ್ಸ್‌ ವಾಹನ ಪಲ್ಟಿಯಾಗಿದೆ. ಅದರಲ್ಲಿದ್ದ 16 ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಶಾಸಕ ಟಿ.ರಘುಮೂರ್ತಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಟಿ.ಎನ್‌.ಕೋಟೆ ಗ್ರಾಮದಲ್ಲಿ ನಡೆಯುತ್ತಿರುವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಚೌಳೂರು ವೀರಭದ್ರಸ್ವಾಮಿ ಪ್ರೌಢಶಾಲೆಯ ಮಕ್ಕಳು ಸರಕು ಸಾಗಣೆ ವಾಹನದಲ್ಲಿ ಸಾಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿಯಾಗಿದೆ ಎಂದು ಪರಶುರಾಂಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !