ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು

Published 25 ಫೆಬ್ರುವರಿ 2024, 16:10 IST
Last Updated 25 ಫೆಬ್ರುವರಿ 2024, 16:10 IST
ಅಕ್ಷರ ಗಾತ್ರ

ಶ್ರೀರಾಂಪುರ: ಎದುರುಗಡೆಯಿಂದ ಬರುತ್ತಿದ್ದ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಮಹಿಳೆ ಗಾಯಗೊಂಡಿರುವ ಘಟನೆ ಶ್ರೀರಾಂಪುರ ಪೊಲೀಸ್‍ ಠಾಣಾ ವ್ಯಾಪ್ತಿಯ ಮತ್ತೋಡು ಸಮೀಪ ಭಾನುವಾರ ನಡೆದಿದೆ.

ಬೇವಿನಹಳ್ಳಿ ಗ್ರಾಮದ ಕರಿಯಮ್ಮ (50) ಮೃತ ಮಹಿಳೆ. ಮಲ್ಲಾಪುರ ಗ್ರಾಮದ ನೇತ್ರಾವತಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.

ಮೃತ ಕರಿಯಮ್ಮ ಅವರು ಮಗಳು ನೇತ್ರಾವತಿ ಹಾಗೂ ಅಳಿಯ ಬಸವರಾಜ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಬೇವಿನಹಳ್ಳಿ ಗ್ರಾಮದಿಂದ ಅಜ್ಜಯ್ಯನಹಟ್ಟಿ ಗ್ರಾಮದಲ್ಲಿ ನೆಡೆಯುತ್ತಿದ್ದ ಜಾತ್ರೆಗೆ ಹೋಗುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಮಗುಚಿ ಬಿದ್ದಿದೆ. ನೇತ್ರಾವತಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ ಚಾಲಕ ಬಸವರಾಜ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT