ಚಳ್ಳಕೆರೆ: ಆಟೊ-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ಇಮಾಂಪುರ ಗ್ರಾಮದ ಬಳಿ ಬುಧವಾರ ನಡೆದಿದೆ.
ವಿಠ್ಠಲನಗರದ ಗಂಗಮ್ಮ (56) ಮೃತ ಮಹಿಳೆ. ಗಂಭೀರವಾಗಿ ಗಾಯಗೊಂಡಿದ್ದ ಈಶ್ವರಪ್ಪ ಎಂಬುವರನ್ನು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಟಿ.ಬಿ.ರಾಜಣ್ಣ ತಿಳಿಸಿದ್ದಾರೆ.