ಗುರುವಾರ , ಆಗಸ್ಟ್ 11, 2022
26 °C

ರಸ್ತೆ ತಡೆ: ಕೇಂದ್ರದ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸದುರ್ಗ: ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ ಸಂಘ
ಹಾಗೂ ಹಸಿರು ಸೇನೆ ಮುಖಂಡರು ಶನಿವಾರ ತಾಲ್ಲೂಕಿನ ಕೆಲ್ಲೋಡು ಗ್ರಾಮದಲ್ಲಿ ರಾಜ್ಯ ಹೆದ್ದಾರಿ
ತಡೆ ಚಳವಳಿ ನಡೆಸಿದರು.

ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್ ಮಾಡಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ
ಕೂಗಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ‘ಬಿಜೆಪಿ ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲವಾಗಿದೆ. ಭೂಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತರನ್ನು ಬೀದಿಪಾಲು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ರೈತರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕೆ.ಸಿ. ಮಹೇಶ್ವರಪ್ಪ, ‘ರೈತರು ಹೇಡಿಗಳಲ್ಲ. ಅವರು ನಾಡಿನ ಕೋಟ್ಯಂತರ ಜನರಿಗೆ ಅನ್ನ ಕೊಡುವ ಶೂರರು. ಹೇಡಿತನದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದರು.

ರೈತ ಮುಖಂಡರಾದ ಕರಿಸಿದ್ದಯ್ಯ, ರಮೇಶ್, ಕುಮಾರಯ್ಯ, ದೇವೇಂದ್ರಪ್ಪ, ಚಿತ್ತಪ್ಪ, ಮುರುಗೆಂದ್ರಪ್ಪ, ಬಸವರಾಜಪ್ಪ, ಸುರೇಶ್ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು