ಶನಿವಾರ, ಅಕ್ಟೋಬರ್ 8, 2022
23 °C

ನಿರಂತರ ಮಳೆ: ಹಿರಿಯೂರು-ಹೊಸದುರ್ಗ ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹಿರಿಯೂರು: ತಾಲ್ಲೂಕಿನ ಭರಮಗಿರಿ ಸಮೀಪ ನಡು ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡ ಪರಿಣಾಮ ಹಿರಿಯೂರು - ಹೊಸದುರ್ಗ ಮಾರ್ಗ ಸಂಪರ್ಕ ಕಡಿತಗೊಂಡಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಹಾಳಾಗಿದ್ದು ಈ ಸಮಸ್ಯೆ ಸೃಷ್ಟಿಯಾಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಪರದಾಡುತ್ತಿದ್ದಾರೆ.

ಹಿರಿಯೂರು ತಾಲ್ಲೂಕಿನ ಭರಮಗಿರಿ ಬೈಪಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ರಸ್ತೆಯಲ್ಲಿ ಸಿಲುಕಿಕೊಂಡ ಲಾರಿಗಳನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಸ್ತೆ ಸಂಪರ್ಕ ಕಡಿತದಿಂದ ಹಿರಿಯೂರಿನಿಂದ ಹೊಸದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ತಲುಪಲು ಚಿತ್ರದುರ್ಗ ಮೂಲಕ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು