ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು: ಮನೆ ಬೀಗ ಮುರಿದು ₹24.30 ಲಕ್ಷ ಮೌಲ್ಯದ ಒಡವೆ ದೋಚಿದ ಕಳ್ಳರು

Published 9 ಜುಲೈ 2024, 15:37 IST
Last Updated 9 ಜುಲೈ 2024, 15:37 IST
ಅಕ್ಷರ ಗಾತ್ರ

ಹಿರಿಯೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದ ದುಷ್ಕರ್ಮಿಗಳು ₹ 24.30 ಲಕ್ಷ ಮೌಲ್ಯದ ಒಡವೆ ಹಾಗೂ ₹ 25,000 ನಗದು ದೋಚಿಕೊಂಡು ಹೋಗಿರುವ ಘಟನೆ ನಗರದ ಅವದಾನಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ.

ತಾಲ್ಲೂಕಿನ ಯರಬಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಶಿಕಲಾ ಅವರ ಮನೆಯಲ್ಲಿ ಕಳವು ನಡೆದಿದೆ. ಕೊಳ್ಳೇಗಾಲದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿನ ತಿಥಿ ಕಾರ್ಯಕ್ಕೆ ಕುಟುಂಬ ಸಮೇತ ತೆರಳಿದ್ದ ವೇಳೆ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

ಸ್ಥಳಕ್ಕೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದರ್ ಕುಮಾರ್ ಮೀನಾ, ಡಿವೈಎಸ್‌ಪಿ ಚೈತ್ರಾ, ಇನ್‌ಸ್ಪೆಕ್ಟರ್ ರಾಘವೇಂದ್ರ ಕಾಂಡಕಿ ಭೇಟಿ ನೀಡಿದ್ದರು. ನಗರ ಠಾಣೆ ಎಸ್ಐ ಮಂಜುನಾಥ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT