ಭಾನುವಾರ, ಆಗಸ್ಟ್ 14, 2022
19 °C

ಮಹಿಳೆಯಿಂದ ₹ 70 ಸಾವಿರ ದೋಚಿ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭರಮಸಾಗರ: ಇಲ್ಲಿನ ಹಳೇ ಬಸ್ ನಿಲ್ದಾಣದ ಶುಕ್ರವಾರ ಕಳ್ಳನೊಬ್ಬ ಮಹಿಳೆಯ ಕೈಯಲ್ಲಿದ್ದ ₹ 70 ಸಾವಿರ ನಗದು ದೋಚಿ ಹಣ ಪರಾರಿಯಾಗಿದ್ದಾನೆ.

ಕೊಳಹಾಳು ಗೊಲ್ಲರಹಟ್ಟಿ ಗ್ರಾಮದ ತಿಪ್ಪಮ್ಮ ಶಿವಣ್ಣ ಹಣ ಕಳೆದುಕೊಂಡವರು. ಅವರು ಇಲ್ಲಿನ ಕೆನರಾ ಬ್ಯಾಂಕಿನಲ್ಲಿ ತಮ್ಮ ಠೇವಣಿ ಬಾಂಡ್ ಮೇಲೆ ₹ 70 ಸಾವಿರ ಸಾಲ ಪಡೆದು ಹಣವನ್ನು ಪ್ಲಾಸ್ಟಿಕ್ ಚೀಲದಲ್ಲಿರಿಸಿಕೊಂಡು ಗ್ರಾಮಕ್ಕೆ ಹೋಗಲು ಬಸ್ ನಿಲ್ದಾಣದ ಬಳಿ ನಿಂತಿದ್ದರು. ಆಗ ಬೈಕ್ ಮೇಲೆ ಬಂದ ಯುವಕನೊಬ್ಬ ಕೈಯಲ್ಲಿದ್ದ ಹಣದ ಚೀಲವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಮಹಿಳೆ ಕೂಗಿಕೊಂಡಾಗ ಅಲ್ಲಿದ್ದ ಸಾರ್ವಜನಿಕರು ಯುವಕನನ್ನು ಹಿಂಬಾಲಿಸಿದರೂ ತಪ್ಪಿಸಿಕೊಂಡಿದ್ದಾನೆ.

ಈ ಬಗ್ಗೆ ಮಹಿಳೆ ದೂರು ನೀಡಿದ್ದು, ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು