ಸಿರಿಗೆರೆ: ಗ್ರಾಮಾಂತರ ಪ್ರದೇಶದಲ್ಲಿಯೂ ಈಗ ಉತ್ತಮ ಶಿಕ್ಷಣ ಸಿಗುತ್ತಿದೆ ಎಂದು ಫಾತಿಮಾ ರಫೀವುಲ್ಲಾ ಅಭಿಪ್ರಾಯಪಟ್ಟರು.

ಸಿರಿಗೆರೆ ಸಮೀಪದ ಹಳವುದರ ಗ್ರಾಮದ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ‘ಶಾಲಾ ವರುಷದ ಹರುಷ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮಾಂತರ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಲವು ಸಂಸ್ಥೆಗಳು ಮುಂದಾಗಿವೆ. ಹಳವುದರ ಗ್ರಾಮದಲ್ಲೂ ಮಾದರಿ ಸಂಸ್ಥೆ ಸ್ಥಾಪಿಸಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪುಟ್ಟ ಗ್ರಾಮದಲ್ಲಿ ಸುಸಜ್ಜಿತ ಶಾಲೆ ಸ್ಥಾಪಿಸಿರುವುದು ಹೆಮ್ಮೆಯ ವಿಷಯ ಎಂದು ಚಳ್ಳಕೆರೆಯ ವಾರಿಯರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನರೇಂದ್ರ ಬಾಬು ಹೇಳಿದರು.

ಆಧುನಿಕ ಒತ್ತಡದಿಂದ ದೂರವಿದ್ದು, ನೈಸರ್ಗಿಕ ಪರಿಸರದಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಬಿ.ಎಲ್. ಸಂತೋಷ್ ತಿಳಿಸಿದರು.

ಸ್ನೇಹಪ್ರಿಯ ವಿದ್ಯಾಸಂಸ್ಥೆಯ ಗೌರವಾಧ್ಯಕ್ಷ ಎಚ್.ಸಿ. ಶರಣಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥಾಪಕ ಎಚ್.ಸಿ. ಪ್ರಸನ್ನಕುಮಾರ್, ಕಾರ್ಯದರ್ಶಿ ಮಮತಾ ಪ್ರಸನ್ನಕುಮಾರ್, ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.