ಹೊಸನಗರ: ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ನಿರ್ಮಿಸಿರುವ ನೂತನ ಗ್ರಂಥಾಲಯ ಕಟ್ಟಡವನ್ನು (ಅರಿವು ಕೇಂದ್ರ) ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.

ನಂತರ ಮಾತನಾಡಿ, ‘ಅರಿವು ಕೇಂದ್ರಗಳು ಗ್ರಾಮೀಣ ಯುವಜನರ ಆಶಾಕಿರಣವಾಗಿವೆ. ಈಗಾಗಲೇ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಧ್ಯಕ್ಷರು ಹಾಗೂ ಸದಸ್ಯರ ಬೇಡಿಕೆಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗಿದೆ’ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಚಿದಂಬರ ಹೂವಿನ ಕೋಣೆ ಮಾತನಾಡಿ, ‘ಮಾರುತಿಪುರ ಗ್ರಾಮ ಪಂಚಾಯಿತಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಸುಸಜ್ಜಿತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಇಂದ್ರೇಶ್ ಎನ್., ಸದಸ್ಯರಾದ ಕಲಾವತಿ ಎಚ್., ಪಿ. ಸುಶೀಲಾ, ಶಂಕರ್ ಶೆಟ್ಟಿ, ಸುಮಾ ಎಚ್., ಅವಿನಾಶ್ ಎಸ್.ಜೆ., ನಾರಾಯಣಪ್ಪ, ಸುವರ್ಣ ಕೆ.ಡಿ., ದೇವರಾಜ್, ಗಂಗಾ, ಭಾನುಮತಿ, ಚಂದ್ರಪ್ಪ ಇದ್ದರು. ಸದಸ್ಯೆ ದೀಪಿಕಾ ಆರ್.ಕೆ. ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.