ಗುರುವಾರ , ಜುಲೈ 29, 2021
21 °C

ಸರ್ಕಾರ ರಚನೆಗೆ ಕಾರಣರಾದವರನ್ನು ಎಂಎಲ್‌ಸಿ ಮಾಡಬೇಕು: ಸಚಿವ ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಿಜೆಪಿ ಸರ್ಕಾರದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಎಚ್‌.ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್‌, ರೋಷನ್‌ ಬೇಗ್‌ ಹಾಗೂ ಆರ್‌.ಶಂಕರ್‌ ಅವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕು ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ರಚನೆಯಲ್ಲಿ ಇವರು ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ವಿಧಾನಪರಿಷತ್‌ ಚುನಾವಣೆಗೆ ನಾಲ್ವರಿಗೆ ಟಿಕೆಟ್‌ ನೀಡುವಂತೆ ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ್ದೇವೆ. ಬಿಜೆಪಿ ಕೋರ್‌ ಕಮಿಟಿ ಸದಸ್ಯರಿಗೂ ಅಭಿಪ್ರಾಯ ತಿಳಿಸಿದ್ದೇವೆ’ ಎಂದರು.

‘ಮುನಿರತ್ನ ಹಾಗೂ ಪ್ರತಾಪಗೌಡ ಅವರು ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ. ರೋಷನ್‌ ಬೇಗ್‌ ಅವರು ಮಾತೃ ಪಕ್ಷಕ್ಕೆ ಮರಳುವುದಿಲ್ಲ. ಇದು ವದಂತಿ ಅಷ್ಟೇ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು