ಮರಳು ದಂಧೆ: 131 ಪ್ರಕರಣ ದಾಖಲು

7
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್

ಮರಳು ದಂಧೆ: 131 ಪ್ರಕರಣ ದಾಖಲು

Published:
Updated:
Prajavani

ಚಿತ್ರದುರ್ಗ: ‘ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಮೂರು ತಿಂಗಳಿನಲ್ಲಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 131 ಪ್ರಕರಣ ದಾಖಲಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ತಿಳಿಸಿದರು.

‘ಮರಳು ಸಾಗಣೆಗೆ ಪರವಾನಗಿ ಇರುವ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪರವಾನಗಿ ಇಲ್ಲದಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

309 ಪ್ರಕರಣ ದಾಖಲು:

ಆತ್ಮಹತ್ಯೆಗೆ ಯತ್ನಿಸಿರುವ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ. ಶೇಖರ್ ಅವರ ವಿರುದ್ಧ ಐಪಿಸಿ ಸೆಕ್ಷನ್‌ 309 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

‘ಶಾಸಕರು ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮ್ಮ ಸಿಬ್ಬಂದಿಯೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದರು.

‘ಮರಳು ಗಣಿಗಾರಿಕೆ ವಿಷಯವಾಗಿ ಶಾಸಕರು ಭಾನುವಾರ ರಾತ್ರಿ ಹೊಸದುರ್ಗ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರಕರಣವೊಂದರ ತನಿಖೆಗೆ ಮೊಳಕಾಲ್ಮುರಿಗೆ ಹೋಗಿದ್ದರಿಂದ ಹೊಸದುರ್ಗಕ್ಕೆ ರಾತ್ರಿ ಹೋಗಲು ಸಾಧ್ಯವಾಗಲಿಲ್ಲ’ ಎಂದು ಹೇಳಿದರು.

‘ಮಧುರೆ ಬಳಿ ಟ್ರ್ಯಾಕ್ಟರ್ ವಿಚಾರದಲ್ಲಿ ಗೊಂದಲವಾಗಿದೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಎಲ್ಲಿಯೂ ಪಕ್ಷಪಾತ ಮಾಡಿಲ್ಲ. ಅಕ್ರಮ ಯಾರೇ ಎಸಗಿದರೂ ಕ್ರಮ ಕೈಗೊಳ್ಳಲು ಸಿದ್ಧ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಾಸಕರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಹೊಸದುರ್ಗ ಠಾಣೆಯ ಪಿಎಸ್‌ಐ ವಿರುದ್ಧ ದೂರು ನೀಡಿದರೆ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !