ಸಂತೇಬೆನ್ನೂರು: ಸಮೀಪದ ಮಂಗೇನಹಳ್ಳಿಯಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಬೈಕ್ ಹಾಗೂ ಕಾರ್ ನಡುವೆ ಭೀಕರ ಅಪಘಾತವಾಗಿ ಭೀಮನೆರೆ ಗ್ರಾಮದ ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಹನಗಳು ಅತಿವೇಗವಾಗಿ ಓಡಾಡುತ್ತಿರುವುದರಿಂದ ಅಪಘಾತಗಳು ಹೆಚ್ಚಿವೆ. ಕೂಡಲೇ ಹಂಪ್ಸ್ ನಿರ್ಮಿಸುವಂತೆ ಆಗ್ರಹಿಸಿ ಹೆದ್ದಾರಿಗೆ ಅಡ್ಡಲಾಗಿ ಮರದ ದಿಮ್ಮಿಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು. ಮಹಿಳೆಯರು ಮೂರು ಕಲ್ಲು, ಪಾತ್ರೆ ಇಟ್ಟು ರಸ್ತೆಯಲ್ಲೇ ಅಡುಗೆ ಮಾಡಿದಂತೆ ಅಣಕು ಪ್ರದರ್ಶಿಸಿ ಧರಣಿ ಕುಳಿತರು. ಇದರಿಂದ ವಾಹನ ಸಂಚಾರ ಸ್ಥಗಿತಗೊಂಡು, ನೂರಾರು ವಾಹನಗಳು ಸಾಲಾಗಿ ನಿಂತಿದ್ದವು.

‘ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಬೃಹತ್ ವಾಹನಗಳನ್ನು ಹಿಂದಿಕ್ಕುವ ಕಾರ್ಗಳು ಏಕಾಏಕಿ ಬಲಕ್ಕೆ ತಿರುಗಿ ಎದುರಿಗೆ ಬರುವ ಬೈಕ್, ಕಾರ್ಗಳಿಗೆ ಡಿಕ್ಕಿ ಹೊಡೆಯುತ್ತಿವೆ. ಈಗಾಗಲೇ ಹಲವು ಅಪಘಾತಗಳು ಸಂಭವಿಸಿವೆ. ಹಂಪ್ಸ್ ನಿರ್ಮಿಸಲು ಮನವಿ ಮಾಡಿದರು ಅಧಿಕಾರಿಗಳು ಗಮನಹರಿಸಿಲ್ಲ. ಹಂಪ್ಸ್ ನಿರ್ಮಿಸುವ ಭರವಸೆ ನೀಡದ ಹೊರತು ರಸ್ತೆ ತಡೆ ನಿಲ್ಲಿಸುವುದಿಲ್ಲ’ ಎಂದು ಗ್ರಾಮದ ಮುಖಂಡ ಲೋಹಿತ್ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಗ್ರಾಮಸ್ಥರಿಗೆ ಹಂಪ್ಸ್ ನಿರ್ಮಿಸುವುದಾಗಿ ಹೇಳಿ ಮನವೊಲಿಸಲು ಪ್ರಯತ್ನಿಸಿದರು. ಲೋಕೋಪಯೋಗಿ ಎಂಜಿನಿಯರ್ ಸ್ಥಳಕ್ಕೆ ಬಂದು ಆರು ದಿನಗಳಲ್ಲಿ ಹಂಪ್ಸ್ ನಿರ್ಮಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ಸಿಪಿಐ ಮಲ್ಲಮ್ಮ ಚೌಬೆ, ಎಸ್ಐ ಜಗದೀಶ್ ಹಾಗೂ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-76365237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.