ಚಿತ್ರದುರ್ಗ: ‘ನಾನಾ ಕಾರಣಗಳಿಂದ ಆಧಾರ್ನಿಂದ ವಂಚಿತರಾಗಿರುವ ಮಕ್ಕಳ ನೋಂದಣಿಗೆ ‘ಸಾಥಿ' ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ತಿಳಿಸಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಸಾಥಿ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಹಾಗೂ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ಅಭಿಯಾನ ಕೈಗೊಳ್ಳಲಾಗುತ್ತಿದೆ’ ಎಂದರು.

‘ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಸಾಥಿ ಸಮಿತಿ ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಕಾರ್ಮಿಕ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಪರಿತ್ಯಕ್ತ ಮಕ್ಕಳ ಸಮೀಕ್ಷೆ ನಡೆಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಮಟ್ಟದಲ್ಲಿ ಇದಕ್ಕೆ ನೆರವಾಗಬೇಕು. ಜನನ ದೃಢೀಕರಣ ಪತ್ರ ಇಲ್ಲದಿದ್ದರೆ ಕಾನೂನು ಸೇವೆಗಳ ಪ್ರಾಧಿಕಾರದ ಗಮನಕ್ಕೆ ತಂದಲ್ಲಿ ಉಚಿತವಾಗಿ ಮಾಡಿಸಿಕೊಡಲಾಗುವುದು’ ಎಂದರು.

‘ಜೂ.26ರೊಳಗೆ ಮಕ್ಕಳನ್ನು ಗುರುತಿಸಿ, 27 ರಿಂದ ಆಗಸ್ಟ್ 5ರವರೆಗೆ ನೋಂದಣಿ ಮಾಡಿಸಬೇಕು. ಆ.9ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತ ವರದಿ ಸಲ್ಲಿಸಲಾಗುವುದು. ನಂತರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ನೀಡಲಿದೆ’ ಎಂದು ವಿವರಿಸಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.